ನವದೆಹಲಿ: ಭೂಮಿ ಖರೀದಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲವು ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಅವರಿಗೆ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಈ ಮೊದಲು ಏಪ್ರಿಲ್ 8ರಂದು ಸಮನ್ಸ್ ನೀಡಲಾಗಿತ್ತು. ಆದರೆ, ಅವರು ವಿಚಾರಣೆಗೆ ಹಾಜರಾಗಲಿಲ್ಲ.

ಹರಿಯಾಣದ ಶಿಕೊಪುರದಲ್ಲಿ ನಡೆದಿರುವ ಭೂ ಖರೀದಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.

ವಾದ್ರಾ ಅವರಿಗೆ ಸೇರಿದ ಸ್ಕೈ ಲೈಟ್ ಹಾಸ್ಪಿಟಾಲಿಟಿ ಕಂಪನಿ ಗುರುಗ್ರಾಮ ಸೆಕ್ಟರ್ 83, ಶಿಕೊಪುರ, ಸಿಕಂದರ್ಪುರ, ಖೇದಿ ದೌಲಾ ಮತ್ತು ಸಿಹಿಯಲ್ಲಿ ₹7.5 ಕೋಟಿಗೆ ಭೂಮಿ ಖರೀದಿಸಿ, ಅದನ್ನು ₹55 ಕೋಟಿಗೆ ಮಾರಾಟ ಮಾಡಿದೆ ಎಂದು ದೂರು ನೀಡಲಾಗಿತ್ತು.

ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿ, ಹೇಳಿಕೆ ದಾಖಲಿಸುವಂತೆ ಇ.ಡಿ ಸಮನ್ಸ್ ಜಾರಿ ಮಾಡಿದೆ.
.ಯುವ ಕ್ರೀಡಾಪಟುಗಳಿಗೆ ಮಾರ್ಗದರ್ಶನ: ಕರ್ಣಂ ಮಲ್ಲೇಶ್ವರಿ ಪ್ರಯತ್ನ ಶ್ಲಾಘಿಸಿದ ಪಿಎಂ.ಅಭಿಮಾನಿಯ ಕಾಲಿಗೆ ಶೂ ತೊಡಿಸಿ 14 ವರ್ಷದ ಪ್ರತಿಜ್ಞೆ ಈಡೇರಿಸಿದ ಪ್ರಧಾನಿ ಮೋದಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.