ತಿರುವನಂತಪುರ: ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ) ನಟ ಜಯರಾಂ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಕೊಚ್ಚಿಯಲ್ಲಿರುವ ಇ.ಡಿ ಕಚೇರಿಗೆ ಫೆಬ್ರುವರಿ 17ರಂದು ಹಾಜರಾಗುವಂತೆ ಸೂಚಿಸಿದೆ.

ಪ್ರಮುಖ ಆರೋಪಿ ಉಣ್ಣಿಕೃಷ್ಣನ್ ಪೋಟಿ ಅವರ ವಿರುದ್ಧ ಸಾಕ್ಷ್ಯಗಳನ್ನು ಸಂಗ್ರಹಿಸುವ ಸಲುವಾಗಿ ಇ.ಡಿಯು ಜಯರಾಂ ಅವರ ವಿಚಾರಣೆಗೆ ಮುಂದಾಗಿದೆ. ಶಬರಿಮಲೆ ದೇವಾಲಯಕ್ಕೆ ಪ್ರಾಯೋಜಕತ್ವದ ಹೆಸರಿನಲ್ಲಿ ಜಯರಾಂ ಅವರು ಪೋಟಿ ಅವರಿಗೆ ನೀಡಿರುವ ಹಣದ ವಿವರಗಳು ಮತ್ತು ಶಬರಿಮಲೆಯ ಚಿನ್ನದ ಲೇಪಿತ ಬಾಗಿಲಿನ ಚೌಕಟ್ಟುಗಳನ್ನು ಚೆನ್ನೈನಲ್ಲಿರುವ ಜಯರಾಂ ಅವರ ಮನೆಗೆ ಕೊಂಡೊಯ್ದ ಕುರಿತು ಇ.ಡಿ ಮಾಹಿತಿ ಕಲೆಹಾಕಲಿದೆ ಎಂದು ಮೂಲಗಳು ತಿಳಿಸಿವೆ.

ಇದೇ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಕೇರಳ ಪೊಲೀಸರ ವಿಶೇಷ ತನಿಖಾ ತಂಡವು ಈ ಹಿಂದೆ ಜಯರಾಂ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿತ್ತು.

ಚಿನ್ನ ಲೇಪಿತ ಬಾಗಿಲ ಚೌಕಟ್ಟಿನ ಭಾಗಗಳೊಂದಿಗೆ ಪೋಟಿ ಅವರು ಚೆನ್ನೈನಲ್ಲಿರುವ ಜಯರಾಂ ನಿವಾಸಕ್ಕೆ ಭೇಟಿ ನೀಡಿದ್ದ ವಿಡಿಯೊ ಇತ್ತೀಚೆಗೆ ಬಹಿರಂಗಗೊಂಡಿತ್ತು.

‘ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಕೊಂಡೊಯ್ಯುತ್ತಿದ್ದ ಚಿನ್ನದ ಲೇಪಿತ ವಸ್ತುಗಳ ಪೂಜೆಯಲ್ಲಿ ಭಾಗವಹಿಸುವ ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ. ನಾನು ಶಬರಿಮಲೆಯ ನಿಜವಾದ ಭಕ್ತನಾಗಿ ಮಾತ್ರ ಪೋಟಿ ಅವರೊಂದಿಗೆ ಸಂಬಂಧ ಹೊಂದಿದ್ದೇನೆ. ಅವರ ಯಾವುದೇ ಅಕ್ರಮ ಚಟುವಟಿಕೆಗಳ ಬಗ್ಗೆ ನನಗೆ ತಿಳಿದಿರಲಿಲ್ಲ’ ಎಂದು ಜಯರಾಂ ಅವರು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.