ವ್ಯಾಪಕವಾದ ಪರಿಣಾಮವನ್ನು ಹೊಂದಿರುವ ಕಾನೂನಿನ ಪ್ರಶ್ನೆಯನ್ನು ಈ ಅರ್ಜಿಯು ಒಳಗೊಂಡಿದೆ. ತನ್ನ ವ್ಯಾಪ್ತಿಯನ್ನು ಮೀರಿ ವರ್ತಿಸಿ, ಅಪರಾಧ ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಹೊಂದಿರುವ ಅಧಿಕಾರವನ್ನು ಕಿತ್ತುಕೊಳ್ಳಲು ಯತ್ನಿಸುವ ಮೂಲಕ ಇ.ಡಿ. ಒಕ್ಕೂಟ ವ್ಯವಸ್ಥೆಗೆ ಸಂಬಂಧಿಸಿದ ಕೆಲವು ಪ್ರಶ್ನೆಗಳನ್ನೂ ಎತ್ತಿದೆ.