ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳದಲ್ಲಿ ಇ.ಡಿ ಅಧಿಕಾರಿಗಳ ಕಾರಿನ ಮೇಲೆ ದಾಳಿ

Published 5 ಜನವರಿ 2024, 6:43 IST
Last Updated 5 ಜನವರಿ 2024, 6:43 IST
ಅಕ್ಷರ ಗಾತ್ರ

ಕೋಲ್ಕತ್ತ: ಶೋಧಕ್ಕೆಂದು ತೆರಳುತ್ತಿದ್ದ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳಿದ್ದ ಕಾರಿನ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಸಂದೇಶ್‌ಖಲಿ ಎಂಬಲ್ಲಿ ಶುಕ್ರವಾರ ದಾಳಿ ನಡೆಸಲಾಗಿದೆ ಎಂದು ‘ಎಎನ್‌ಐ’ ಸುದ್ದಿ ಸಂಸ್ಥೆ ವರದಿ ಮಾಡಿದೆ.

ರೋಹಿಂಗ್ಯಾಗಳು ಈ ದಾಳಿ ಮಾಡಿದ್ದಾರೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ಆರೋಪಿಸಿದೆ.

ನಾಲ್ಕೂ ಬದಿಯಲ್ಲಿ ಕಾರಿನ ಗಾಜುಗಳು ಪುಡಿಯಾಗಿದ್ದು, ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಬಿಜೆಪಿ ಘಟಕ ಅಧ್ಯಕ್ಷ ಸುಕಾಂತ ಮಜುಂದರ್‌, ‘ದೂರು ಅಥವಾ ಭ್ರಷ್ಟಾಚಾರದ ಆರೋಪ ಇರುವವರ ಮೇಲೆ ಇ.ಡಿ ದಾಳಿ ನಡೆಸುವುದು ಸ್ವಾಭಾವಿಕ. ಆದರೆ ಸಂದೇಶ್‌ಖಲಿಯಲ್ಲಿ ಇ.ಡಿ ಅಧಿಕಾರಿಗಳ ಮೇಲೆ ನಡೆದ ದಾಳಿಯು, ರಾಜ್ಯದ ಕಾನೂನು ಸುವ್ಯವಸ್ಥೆಗೆ ರೋಹಿಂಗ್ಯಾಗಳು ಏನು ಮಾಡುತ್ತಿದ್ದಾರೆ ಎನ್ನುವುದನ್ನು ತೋರಿಸಿದೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT