ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ರಕರ್ತ ವಾಗ್ಳೆ ಮೇಲೆ ಹಲ್ಲೆ ಖಂಡಿಸಿದ ಸಂಪಾದಕರ ಒಕ್ಕೂಟ

Published 10 ಫೆಬ್ರುವರಿ 2024, 13:46 IST
Last Updated 10 ಫೆಬ್ರುವರಿ 2024, 13:52 IST
ಅಕ್ಷರ ಗಾತ್ರ

ನವದೆಹಲಿ: ಮಹಾರಾಷ್ಟ್ರದ ಪುಣೆಯಲ್ಲಿ ಹಿರಿಯ ಪತ್ರಕರ್ತ ನಿಖಿಲ್ ವಾಗ್ಳೆ ಅವರ ಮೇಲೆ ನಡೆದ ದಾಳಿಯನ್ನು ಖಂಡಿಸಿರುವ ಭಾರತೀಯ ಸಂಪಾದಕರ ಒಕ್ಕೂಟವು ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.

ಬಿಜೆಪಿಯ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಅವರಿಗೆ ಭಾರತ ರತ್ನ ಘೋಷಣೆ ಮಾಡಿದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಮತ್ತು ಅಡ್ವಾಣಿ ಅವರ ವಿರುದ್ಧ ನಿಖಿಲ್‌ ವಾಗ್ಳೆ ನೀಡಿದ್ದಾರೆ ಎನ್ನಲಾದ ಹೇಳಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಅವರ ಕಾರಿನ ಮೇಲೆ ದಾಳಿ ನಡೆಸಿದ್ದರು.

ದಾಳಿಯನ್ನು ಖಂಡಿಸಿ ಪುಣೆಯ ಆಡಳಿತ ಮತ್ತು ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದಿರುವ ಒಕ್ಕೂಟವು, ಕಠಿಣ ಕ್ರಮಕ್ಕೆ ಆಗ್ರಹಿಸಿದೆ. ಪುಣೆಯ ವಿಶ್ರಾಮ್‌ಬಾಗ್‌ ಪೊಲೀಸ್ ಠಾಣೆಯಲ್ಲಿ ವಾಗ್ಳೆ ವಿರುದ್ಧ ಎಫ್‌ಐಆರ್ ದಾಖಲಾಗಿರುವುದಕ್ಕೂ ಒಕ್ಕೂಟ ಕಳವಳ ವ್ಯಕ್ತಪಡಿಸಿದೆ. ‘ಪತ್ರಕರ್ತರನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ಉದ್ದೇಶದಿಂದ ಕಾನೂನಿನ ದುರುಪಯೋಗ ಮಾಡಲಾಗುತ್ತಿದೆ’ ಎಂದು ಒಕ್ಕೂಟ ಆತಂಕ ವ್ಯಕ್ತಪಡಿಸಿದೆ.

ಪತ್ರಕರ್ತರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವ ಮುನ್ನ ಕಾನೂನು ಅನುಷ್ಠಾನ ಸಂಸ್ಥೆಗಳು ಸಂಯಮದಿಂದ ವರ್ತಿಸುವಂತೆ ಮತ್ತು ತನಿಖೆ ಪ್ರಕ್ರಿಯೆಯೇ ಶಿಕ್ಷೆಯಂತಾಗದಂತೆ ನೋಡಿಕೊಳ್ಳಲು ಒಕ್ಕೂಟ ಆಗ್ರಹಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT