ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದ Fact Check ಘಟಕಕ್ಕೆ ಸುಪ್ರೀಂ ಕೋರ್ಟ್ ತಡೆ: ಎಡಿಟರ್ಸ್ ಗಿಲ್ಡ್ ಸ್ವಾಗತ

Published 22 ಮಾರ್ಚ್ 2024, 2:43 IST
Last Updated 22 ಮಾರ್ಚ್ 2024, 2:43 IST
ಅಕ್ಷರ ಗಾತ್ರ

ನವದೆಹಲಿ: ಸುಳ್ಳು ಸುದ್ದಿ ಪತ್ತೆಗೆ ಪತ್ರಿಕಾ ಮಾಹಿತಿ ಬ್ಯೂರೋ (ಪಿಐಬಿ) ಅಡಿ ಫ್ಯಾಕ್ಟ್ ಚೆಕ್‌ ಘಟಕವನ್ನು ಸ್ಥಾಪಿಸುವ ಕೇಂದ್ರ ಸರ್ಕಾರದ ಅಧಿಸೂಚನೆಗೆ ತಡೆ ನೀಡಿದ ಸುಪ್ರೀಂ ಕೋರ್ಟ್ ನಿರ್ಧಾರವನ್ನು ಭಾರತೀಯ ಎಡಿಟರ್ಸ್ ಗಿಲ್ಡ್ ಸ್ವಾಗತಿಸಿದೆ.

‘ಐಟಿ ನಿಯಮಗಳು–2021ರಡಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪಿಸುವ ಕೇಂದ್ರ ಸರ್ಕಾರದ ಅಧಿಸೂಚನೆಗೆ ತಡೆ ನೀಡಿದ್ದನ್ನು ಭಾರತೀಯ ಎಡಿಟರ್ಸ್ ಗಿಲ್ಡ್ ಸ್ವಾಗತಿಸುತ್ತದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಮಾಹಿತಿ ತಂತ್ರಜ್ಞಾನ ನಿಯಮ 2021ರಡಿ ಫ್ಯಾಕ್ಟ್ ಚೆಕ್‌ ಘಟಕ ಸ್ಥಾಪಿಸಿ ಕೇಂದ್ರ ಎಲೆಕ್ಟ್ರಾನಿಕ್ಸ್ ಹಾಗೂ ಐಟಿ ಸಚಿವಾಲಯವು ಮಾರ್ಚ್ 20ರಂದು ಅಧಿಸೂಚನೆ ಹೊರಡಿಸಿತ್ತು. ಇದರ ದುರುಪಯೋಗದ ಸಾಧ್ಯತೆಯ ಬಗ್ಗೆ ನಾಗರಿಕ ಸಮಾಜದ ಗುಂಪುಗಳು ಮತ್ತು ಮಾಧ್ಯಮಗಳು ಕಳವಳ ವ್ಯಕ್ತಪಡಿಸಿದ್ದವು.

ಕೇಂದ್ರದ ಈ ಅಧಿಸೂಚನೆಗೆ ಗುರುವಾರ ಸುಪ್ರೀಂ ಕೋರ್ಟ್ ತಡೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT