ಗುರುವಾರ, 30 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಜಿನಿಯರಿಂಗ್‌: ಕೌನ್ಸೆಲಿಂಗ್‌ ಫಲಿತಾಂಶ ವಿಳಂಬ

Published 26 ಸೆಪ್ಟೆಂಬರ್ 2023, 23:28 IST
Last Updated 26 ಸೆಪ್ಟೆಂಬರ್ 2023, 23:28 IST
ಅಕ್ಷರ ಗಾತ್ರ

ಬೆಂಗಳೂರು:  ಎಂಜಿನಿಯರಿಂಗ್‌ ಕೋರ್ಸ್‌ಗಳ ಎರಡನೇ ಸುತ್ತಿನ ಕೌನ್ಸೆಲಿಂಗ್‌ ಫಲಿತಾಂಶ ಪ್ರಕಟಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವಿಳಂಬ ಮಾಡಿರುವುದು ವಿದ್ಯಾರ್ಥಿಗಳ ಆತಂಕಕ್ಕೆ ಕಾರಣವಾಗಿದೆ.

ಕೆಇಎ ಅಧಿಸೂಚನೆಯ ಪ್ರಕಾರ, ಎರಡನೇ ವಿಸ್ತೃತ ಸುತ್ತಿನ ಫಲಿತಾಂಶ ಸೆ.23 ರಂದು ರಾತ್ರಿ 8ರ ನಂತರ ಬಿಡುಗಡೆ ಮಾಡಬೇಕಿತ್ತು. ಆದರೆ, ಮೂರು ದಿನಗಳು ಕಳೆದರೂ ಫಲಿತಾಂಶಗಳನ್ನು ಬಿಡುಗಡೆ ಮಾಡಿಲ್ಲ ಎಂದು ಹಲವು ವಿದ್ಯಾರ್ಥಿಗಳು ದೂರಿದ್ದಾರೆ.

‘ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ. ಸೆ.27ರಂದು ಫಲಿತಾಂಶ ಪ್ರಕಟಿಸಲಾಗುವುದು’ ಎಂದು ಕೆಇಎ ಪ್ರತಿಕ್ರಿಯಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT