ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಈನಾಡು ಪತ್ರಿಕೆ–ತೆಲುಗು ETV, ‘ರಾಮೋಜಿ ಫಿಲಂ ಸಿಟಿ’ ಸಂಸ್ಥಾಪಕ ರಾಮೋಜಿ ರಾವ್ ನಿಧನ

Published 8 ಜೂನ್ 2024, 2:15 IST
Last Updated 8 ಜೂನ್ 2024, 2:15 IST
ಅಕ್ಷರ ಗಾತ್ರ

ಹೈದರಾಬಾದ್: ಈನಾಡು ಪತ್ರಿಕೆ, ತೆಲುಗು ಈಟಿವಿ ಹಾಗೂ ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ಅವರು ಇಂದು (ಶನಿವಾರ) ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.

ಈಚೆಗೆ ಅನಾರೋಗ್ಯಕ್ಕೊಳಗಾಗಿದ್ದ ರಾಮೋಜಿ ರಾವ್ ಅವರನ್ನು ಹೈದರಾಬಾದ್‌ನ ಸ್ಟಾರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ರಾಮೋಜಿ ರಾವ್ ನಿಧನಕ್ಕೆ ರಾಜಕೀಯ ನಾಯಕರು ಸೇರಿದಂತೆ ಚಿತ್ರರಂಗದ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ರಾಮೋಜಿ ರಾವ್ ಅವರ ಅಂತ್ಯಕ್ರಿಯೆಯನ್ನು ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ತೆಲಂಗಾಣ ಸರ್ಕಾರ ನಿರ್ಧರಿಸಿದೆ. ಸಿಡಬ್ಲ್ಯುಸಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ರಾಜ್ಯ ಮುಖ್ಯ ಕಾರ್ಯದರ್ಶಿ ರಂಗಾರೆಡ್ಡಿಗೆ ನಿರ್ದೇಶನ ನೀಡಿದ್ದಾರೆ ಎಂದು ತೆಲಂಗಾಣ ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT