ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ: ಬಿಸಿಯೂಟದಲ್ಲಿ ಮೊಟ್ಟೆ, ಬಾಳೆಹಣ್ಣು

Published 8 ನವೆಂಬರ್ 2023, 15:58 IST
Last Updated 8 ನವೆಂಬರ್ 2023, 15:58 IST
ಅಕ್ಷರ ಗಾತ್ರ

ಮುಂಬೈ: ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ (2023–24) ಮಧ್ಯಾಹ್ನದ ಬಿಸಿಯೂಟದಲ್ಲಿ ಮೊಟ್ಟೆ, ಬಾಳೆಹಣ್ಣು ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ.

ಅಕ್ಕಿ ಮತ್ತು ಬೇಳೆಯಿಂದ ತಯಾರಿಸಿದ ಕಿಚಡಿ ಜೊತೆಗೆ, ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ (ಬುಧವಾರ ಅಥವಾ ಶುಕ್ರವಾರ) ಬೇಯಿಸಿದ ಮೊಟ್ಟೆ ಅಥವಾ ’ಎಗ್‌ ಪಲಾವ್‌‘ ಅಥವಾ 'ಎಗ್‌ ಬಿರಿಯಾನಿ' ನೀಡಲಾಗುವುದು. ಸಸ್ಯಹಾರಿ ವಿದ್ಯಾರ್ಥಿಗಳಿಗೆ ಆ ದಿನ ಬಾಳೆಹಣ್ಣು ಅಥವಾ ಇನ್ಯಾವುದೇ ಬೇರೆ ಹಣ್ಣು ನೀಡಲಾಗುವುದು ಎಂದು ಮಂಗಳವಾರ ಹೊರಡಿಸಲಾದ ಸುತ್ತೋಲೆಯಲ್ಲಿ  (ಜಿಆರ್‌) ತಿಳಿಸಿದೆ.

ಪ್ರಧಾನ ಮಂತ್ರಿ ಪೋಷಣ್‌ ಶಕ್ತಿ ನಿರ್ಮಾಣ್‌ ಯೋಜನೆಯಡಿ ಮೊಟ್ಟೆಗಳನ್ನು ಸೇರಿಸಲಾಗುವುದು. ನಿಯಮಿತ ಪೋಷಣೆಯ ಹೊರತಾಗಿ, ವಾರಕ್ಕೊಮ್ಮೆ ಮೊಟ್ಟೆಗಳನ್ನು 23 ವಾರ ನೀಡಲಾಗುವುದು ಎಂದಿದೆ.

ಮಹಾರಾಷ್ಟ್ರದಲ್ಲಿ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ 1ರಿಂದ 8ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT