ನವದೆಹಲಿ: ಜನವರಿ 26ರ ಗಣರಾಜ್ಯೋತ್ಸವಕ್ಕೆ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್–ಸಿಸಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಭಾನುವಾರ ತಿಳಿಸಿದೆ.

‘ಇದೇ ಮೊದಲ ಬಾರಿಗೆ ಅರಬ್ ರಿಪಬ್ಲಿಕ್ ಆಫ್ ಈಜಿಪ್ಟ್ ಅಧ್ಯಕ್ಷರು ನಮ್ಮ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಲಿದ್ದಾರೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

‘ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರ ಮೂಲಕ ಅ.16ರಂದುಸಿಸಿ ಅವರಿಗೆ ಔಪಚಾರಿಕ ಆಹ್ವಾನವನ್ನು ಕಳುಹಿಸಿಕೊಟ್ಟಿದ್ದರು. ಉಭಯ ದೇಶಗಳ ರಾಜತಾಂತ್ರಿಕ ಸಂಬಂಧಕ್ಕೆ 75 ವರ್ಷಗಳು ಸಂದಿವೆ’ ಎಂದು ಅದು ತಿಳಿಸಿದೆ. ಭಾರತವು ಜಿ–20 ಅಧ್ಯಕ್ಷ ಸ್ಥಾನ ವಹಿಸುವ 2022–23ರ ಅವಧಿಯಲ್ಲಿ ಅತಿಥಿ ರಾಷ್ಟ್ರವಾಗಿ ಈಜಿಪ್ಟ್ ಅನ್ನು ಆಹ್ವಾನಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.