ನವದೆಹಲಿ: ಬಕ್ರೀದ್ ಹಬ್ಬದ ಅಂಗವಾಗಿ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ಕೋರಿದ್ದಾರೆ. ಈ ಹಬ್ಬವು ಸಮಾಜದಲ್ಲಿ ಸಹೋದರತ್ವ ಮನೋಭಾವವನ್ನು ಮತ್ತಷ್ಟು ಗಟ್ಟಿಗೊಳಿಸಲಿ ಎಂದು ಹಾರೈಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಶುಭಾಶಯದ ಪೋಸ್ಟ್ ಹಂಚಿಕೊಂಡಿರುವ ಪ್ರಧಾನಿ ಮೋದಿ, ‘ಈದ್ ಉಲ್-ಅದಾ ಶುಭಾಶಯಗಳು. ಎಲ್ಲರಿಗೂ ಯಶಸ್ಸು ಮತ್ತು ಉತ್ತಮ ಆರೋಗ್ಯ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಸಮಾಜದಲ್ಲಿ ಸಹೋದರತ್ವ ಮತ್ತು ಸಂತೋಷದ ಮನೋಭಾವ ಮತ್ತಷ್ಟು ಗಟ್ಟಿಗೊಳ್ಳಲಿ’ ಎಂದು ಹೇಳಿದ್ದಾರೆ.

ಬಕ್ರೀದ್ ಶುಭಾಶಯ ತಿಳಿಸಿರುವ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ‘ಎಲ್ಲರಿಗೂ ಬಕ್ರೀದ್ ಹಬ್ಬದ ಹಾರ್ದಿಕ ಶುಭಾಶಯಗಳು. ಇಂದಿನ ಈ ದಿನ ನಿಮ್ಮ ಮನೆಯಲ್ಲಿ ಪ್ರೀತಿ, ಸೌಹಾರ್ದತೆ ಮತ್ತು ಸಂತೋಷ ತುಂಬಿರಲಿ’ ಎಂದು ಹಾರೈಸಿದ್ದಾರೆ.

‘ಬಕ್ರೀದ್ ಹಬ್ಬವು ತ್ಯಾಗ, ನಂಬಿಕೆ, ಕರುಣೆ ಮತ್ತು ಕ್ಷಮಾಗುಣದ ಸಾರ್ವಕಾಲಿಕ ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ. ಈ ಪವಿತ್ರ ಹಬ್ಬವು ನಮ್ಮಲ್ಲಿ ಸಹೋದರತ್ವದ ಮನೋಭಾವವನ್ನು ಮತ್ತಷ್ಟು ಗಟ್ಟಿಗೊಳಿಸಲು, ಏಕತೆಯ ಬಾಂಧವ್ಯವನ್ನು ಬಲಪಡಿಸಲು ಹಾಗೂ ಶಾಂತಿ, ಸೌಹಾರ್ದ ಸಮಾಜದ ನಿರ್ಮಾಣಕ್ಕಾಗಿ ಒಟ್ಟಾಗಿ ಕೆಲಸ ಮಾಡಲು ಸ್ಫೂರ್ತಿ ನೀಡಲಿ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಬಕ್ರೀದ್ ಹಬ್ಬದ ಶುಭಾಶಯ ತಿಳಿಸಿದ್ದಾರೆ. ‘ಎಕ್ಸ್’ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ತ್ಯಾಗ, ಬಲಿದಾನದ ಸಂಕೇತವಾದ ಈ ಪವಿತ್ರ ಹಬ್ಬವು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಹೋದರತ್ವವು ನೆಲೆಗೊಳ್ಳಲು ಪ್ರೇರಣೆಯಾಗಲಿ’ ಎಂದು ಬರೆದುಕೊಂಡಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡ ಅವರು ಶುಭಾಶಯದ ಸಂದೇಶ ಹಂಚಿಕೊಂಡಿದ್ದು, ‘ಸಮಸ್ತ ಮುಸ್ಲಿಂ ಸಹೋದರ ಸಹೋದರಿಯರಿಗೆ ಬಕ್ರೀದ್ ಹಬ್ಬದ ಹಾರ್ದಿಕ ಶುಭಾಶಯಗಳು. ತ್ಯಾಗ, ಬಲಿದಾನ ಮತ್ತು ಭ್ರಾತೃತ್ವದ ಸಂಕೇತವಾದ ಈ ಪವಿತ್ರ ಹಬ್ಬವು ಎಲ್ಲರ ಬಾಳಿನಲ್ಲಿ ಸುಖ, ಶಾಂತಿ, ನೆಮ್ಮದಿ, ಮತ್ತು ಸಮೃದ್ಧಿಯನ್ನು ತರಲಿ ಎಂದು ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.