ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ | ವೇಶ್ಯಾವಾಟಿಕೆ: ಆಫ್ರಿಕಾ ಮೂಲದ ಎಂಟು ಮಹಿಳೆಯರ ರಕ್ಷಣೆ, ಇಬ್ಬರ ಬಂಧನ

Published 11 ಏಪ್ರಿಲ್ 2024, 6:37 IST
Last Updated 11 ಏಪ್ರಿಲ್ 2024, 6:37 IST
ಅಕ್ಷರ ಗಾತ್ರ

ಥಾಣೆ: ನವಿ ಮುಂಬೈಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆಫ್ರಿಕಾ ಮೂಲದ ಇಬ್ಬರು ಮಹಿಳೆಯರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಇದೇ ಪ್ರಕರಣದಲ್ಲಿ ಆಫ್ರಿಕಾ ಮೂಲದ ಎಂಟು ಮಹಿಳೆಯರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಖಾರ್‌ಘರ್‌ ಎಂಬಲ್ಲಿ ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ದಾಳಿ ನಡೆಸಲಾಗಿದೆ ಎಂದು ಇನ್‌ಪೆಕ್ಟರ್ ರಾಜೀವ್ ಶೆಜ್ವಾಲ್ ತಿಳಿಸಿದ್ದಾರೆ.

ದಾಳಿ ವೇಳೆ ಓರ್ವ ಮಹಿಳೆ ಪರಾರಾಯಾಗಿದ್ದಾಳೆ. 25ರಿಂದ 30 ವರ್ಷ ವಯೋಮಾನದ ಆಫ್ರಿಕಾ ಮೂಲದ ಎಂಟು ಮಹಿಳೆಯರನ್ನು ರಕ್ಷಿಸಲಾಗಿದೆ. ಅವರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT