ಚೆನ್ನೈ: ತಮಿಳುನಾಡಿನ ರಾಮೇಶ್ವರದ ಎಂಟು ಮೀನುಗಾರರನ್ನು ಶ್ರೀಲಂಕಾ ಅಧಿಕಾರಿಗಳು ಭಾನುವಾರ ಬಂಧಿಸಿದ್ದಾರೆ. ಅವರ ದೋಣಿಗಳನ್ನು ವಶಕ್ಕೆ ಪಡೆದಿದ್ದದಾರೆ. ‘ಈ ಮೀನುಗಾರರ ಸುರಕ್ಷಿತ ವಾಪಸಾತಿಯ ಕುರಿತು ಕೇಂದ್ರ ಸರ್ಕಾರವು ಮಧ್ಯಪ್ರವೇಶಿಸಬೇಕು’ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಒತ್ತಾಯಿಸಿದ್ದಾರೆ.

ಈ ಬಗ್ಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರಿಗೆ ಸ್ಟಾಲಿನ್ ಪತ್ರ ಬರೆದಿದ್ದಾರೆ. ‘ಮೀನುಗಾರಿಕೆ ಋತು ಈಗಷ್ಟೇ ಆರಂಭಗೊಂಡಿದೆ. ಮೀನುಗಾರರ ಬಂಧನದ ಕುರಿತು ಭಾರತ ಮತ್ತು ಶ್ರೀಲಂಕಾ ಮಧ್ಯೆ ದ್ವಿಪಕ್ಷೀಯ ಒಪ್ಪಂದವೊಂದನ್ನು ಮಾಡಿಕೊಳ್ಳಬೇಕು’ ಎಂದು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.