ಮುಂಬೈ: ಮಹಾರಾಷ್ಟ್ರದಲ್ಲಿ ಭಾನುವಾರ ಭಾರಿ ಮಳೆ, ಮಿಂಚಿನ ಹೊಡೆತಕ್ಕೆ ಎಂಟು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇರಳದ ನಾಲ್ಕು ಜಿಲ್ಲೆಗಳಲ್ಲಿ ಮೂರು ಮಂದಿ ಮಳೆಯ ಪರಿಣಾಮಗಳಿದಾಗಿ ಹಾಗೂ ಉತ್ತರ ಪ್ರದೇಶದಲ್ಲಿ 11 ಮಂದಿ ಸಿಡಿಲು ಬಡಿದು ಮೃತಪಟ್ಟಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ಹೇಳಿದ್ದಾರೆ.

ಕರಾವಳಿ ಜಿಲ್ಲೆಗಳಾದ ರತ್ನಗಿರಿ, ರಾಯಗಢ ಜಿಲ್ಲೆಗಳಿಗೆ ಹವಮಾನ ಇಲಾಖೆಯು ‘ರೆಡ್ ಅಲರ್ಟ್’ ಘೋಷಿಸಿದ್ದು, ಪಾಲ್ಘರ್, ಠಾಣೆ, ಸಿಂಧುದುರ್ಗ, ಪುಣೆಯ ಘಾಟಿ ಪ್ರದೇಶಗಳು, ಸತಾರಾ, ಕೊಲ್ಹಾಪುರ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ರಾಜ್ಯ ವಿಪತ್ತು ನಿರ್ವಹಣಾ ಪಡೆಯನ್ನು (ಎಸ್ಡಿಆರ್ಎಫ್) ರಕ್ಷಣಾ ಕಾರ್ಯಗಳಿಗೆ ನಿಯೋಜಿಸಲಾಗಿದೆ.

ಎಸ್ಡಿಆರ್ಎಫ್ ಬಿಡುಗಡೆಗೊಳಿಸಿದ ವರದಿ ಪ್ರಕಾರ ಶನಿವಾರ ಬೆಳಿಗ್ಗೆ 11 ಗಂಟೆಯಿಂದ ಭಾನುವಾರ ಬೆಳಿಗ್ಗೆ 11ರವರೆಗೆ, ‘ರತ್ನಗಿರಿ ಜಿಲ್ಲೆಯಲ್ಲಿ ಗರಿಷ್ಠ ಮಳೆಯಾಗಿದ್ದು, (8.81 ಸೆಂ.ಮೀ.) ರಾಯಗಢದಲ್ಲಿ 6.5 ಸೆಂ.ಮೀ., ಸಿಂಧುದುರ್ಗದಲ್ಲಿ 4.3 ಸೆಂ.ಮೀ., ಠಾಣೆಯಲ್ಲಿ 2.9 ಸೆಂ.ಮೀ. ಯವತ್ಮಾಲ್ ಜಿಲ್ಲೆಯಲ್ಲಿ 2.7 ಸೆಂ.ಮೀ. ಮಳೆಯಾಗಿದೆ.

ಮಹಾರಾಷ್ಟ್ರದ ವಿವಿಧೆಡೆ ಮಳೆ ಸಂಬಂಧಿ ಅನಾಹುತಗಳಿಂದ 8 ಮಂದಿ ಪ್ರಾಣ ಕಳೆದುಕೊಂಡಿದ್ದು, 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಮುಂಬೈ, ಸಿಂಧುದುರ್ಗ, ಧುಲೆ, ನಾಸಿಕ್, ಸಂಭಾಜಿನಗರ, ನಂದೂರ್ಬರ್, ಅಮರಾವತಿ ಜಿಲ್ಲೆಗಳಲ್ಲಿ ಮಿಂಚಿನ ಹೊಡೆತದಿಂದ ಇವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕೊಂಕಣ ತೀರದ ಪ್ರಮುಖ ನದಿಗಳು, ರತ್ನಗಿರಿ ಜಿಲ್ಲೆಯ ಜಗ್ಬುಡಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ನದಿ ನೀರಿನ ಮಟ್ಟ ಉಕ್ಕಿ ಹರಿದರೆ, ಖೇಡ್, ಅಲ್ಸುರೆ, ಛಿಂಚಘಢ, ಪ್ರಭುವಾಡಿ ಜಿಲ್ಲೆಗಳಲ್ಲಿ ಸಮಸ್ಯೆ ಉಂಟಾಗಲಿದೆ ಎಂದು ವಿಪತ್ತು ನಿರ್ವಹಣಾ ತಂಡವು ವರದಿಯಲ್ಲಿ ತಿಳಿಸಿದೆ.

ಜೂ.19ರವರೆಗೆ ಭಾರಿ ಮಳೆ:

‘ಆಂಧ್ರಪ್ರದೇಶದ ವಿವಿಧೆಡೆಗಳಲ್ಲಿ ಜೂನ್ 19ರವರೆಗೂ ಭಾರಿ ಮಳೆಯಾಗಲಿದೆ’ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ರಾಜ್ಯದ ಉತ್ತರ ಕರಾವಳಿ ಭಾಗದಲ್ಲಿ ಜೂನ್ ಹಾಗೂ 16ರಂದು ಗುಡುಗು ಸಹಿತ 50 ಕಿ.ಮೀ. ವೇಗದಲ್ಲಿ ಗಾಳಿ ಸಹಿತ ಮಳೆಯಾಗಲಿದೆ ಎಂದು ಹೇಳಿದೆ.

‘ಕರಾವಳಿ ಸಹಿತ ರಾಜ್ಯದ ವಿವಿಧೆಡೆಗಳಲ್ಲಿ ಗುಡುಗು ಸಹಿತ ಮಿಂಚು ಇರಲಿದೆ’ ಎಂದು ಅಮರಾವತಿಯ ಹವಾಮಾನ ಇಲಾಖೆ ಕೇಂದ್ರ ಬಿಡುಗಡೆಗೊಳಿಸಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಕೇರಳದ 4 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’:

ಕೇರಳದ ಕಾಸರಗೋಡು, ಕಣ್ಣೂರು, ವಯನಾಡ್, ಕೋಯಿಕ್ಕೋಡ್ ಹಾಗೂ ಮಲಪ್ಪುರಂ ಜಿಲ್ಲೆಗಳಿಗೆ ಸೋಮವಾರದವರೆಗೆ ಹವಾಮಾನ ಇಲಾಖೆಯು ‘ರೆಡ್ ಅಲರ್ಟ್’ ಘೋಷಿಸಿದೆ. ಈ ಜಿಲ್ಲೆಗಳ ವ್ಯಾಪ್ತಿಯಲ್ಲಿ ಎರಡು ದಿನಗಳ ಅವಧಿಯಲ್ಲಿ ಮುಂಗಾರು ತೀವ್ರಗೊಂಡಿದೆ. ಮಳೆಗೆ ಸಂಬಂಧಿಸಿದ ಅವಘಡಗಳಲ್ಲಿ ಮೂವರು ಮೃತಪಟ್ಟಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಪ್ರದೇಶ–11 ಸಾವು:

ಸಿಡಿಲು ಬಡಿದು ಉತ್ತರ ಪ್ರದೇಶದ ಪ್ರಯಾಗರಾಜ್, ಸಂಭಲ್, ಗೋರಖಪುರ ಹಾಗೂ ಬಿದ್ನೌರ್ ಜಿಲ್ಲೆಗಳಲ್ಲಿ 11 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.