ಭಾನುವಾರ, 12 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಚ್ಚಿ: ಎಂಟು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

Published 7 ಸೆಪ್ಟೆಂಬರ್ 2023, 12:47 IST
Last Updated 7 ಸೆಪ್ಟೆಂಬರ್ 2023, 12:47 IST
ಅಕ್ಷರ ಗಾತ್ರ

ತಿರುವನಂತಪುರ: ಎಂಟು ವರ್ಷದ ಬಾಲಕಿಯನ್ನು ಅಪಹರಿಸಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣ ಕೇರಳದ ಕೊಚ್ಚಿ ಸಮೀಪದ ಆಲುವಾದಲ್ಲಿ ಗುರುವಾರ ನಡೆದಿದೆ.

ಬಾಲಕಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಯ ತಂದೆ, ತಾಯಿ ವಲಸೆ ಕಾರ್ಮಿಕರಾಗಿದ್ದಾರೆ. ಸ್ಥಳೀಯ ವ್ಯಕ್ತಿಯೊಬ್ಬ ಈ ಕೃತ್ಯ ಎಸಗಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಆರೋಪಿಯು ಬಾಲಕಿಯನ್ನು ಆಕೆಯ ಮನೆಯಿಂದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಬಾಲಕಿಯ ಬೊಬ್ಬೆ ಕೇಳಿ ಅಕ್ಕ ಪಕ್ಕದ ಮನೆಯವರು ಸ್ಥಳಕ್ಕೆ ಧಾವಿಸಿದಾಗ ಆತ ಪರಾರಿಯಾಗಿದ್ದಾನೆ’ ಎಂದು ಸ್ಥಳೀಯರು ಹೇಳಿದ್ದಾರೆ.

ಸಿ.ಸಿ.ಟಿ.ವಿ. ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಸಂತ್ರಸ್ತ ಬಾಲಕಿಯು ಆರೋಪಿಯನ್ನು ಗುರುತಿಸಿದ್ದಾಳೆ ಎಂದು ಪೊಲೀಸರು ವಿವರಿಸಿದ್ದಾರೆ.

ಜುಲೈ ತಿಂಗಳಲ್ಲಿ ಇದೇ ಪ್ರದೇಶದಲ್ಲಿ ವಲಸೆ ಕಾರ್ಮಿಕರೊಬ್ಬರ ಐದು ವರ್ಷದ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಕೊಲೆ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT