ನವದೆಹಲಿ: ಉತ್ತರಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಳೆ ಸಂಬಂಧಿ ಅನಾಹುತಗಳಿಂದ ಎರಡು ದಿನಗಳಲ್ಲಿ 18 ಮಂದಿ ಮೃತಪಟ್ಟಿದ್ದಾರೆ.

ಕೇರಳ, ಉತ್ತರಾಖಂಡ, ಹಿಮಾಚಲಪ್ರದೇಶ ಹಾಗೂ ಪಶ್ಚಿಮ ಬಂಗಾಳದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ಎಚ್ಚರಿಕೆ ನೀಡಿದೆ.

ರಾಜಸ್ಥಾನದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ತಲೆದೋರಿದೆ. ಅರುಣಾಚಲಪ್ರದೇಶ ಹಾಗೂ ಸಿಕ್ಕಿಂನಲ್ಲಿ ಮಳೆಯಿಂದ ಭೂಕುಸಿತ ಸಂಭವಿಸಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಜುಲೈ 18ರಿಂದ 19ರವರೆಗೆ ಉತ್ತರಪ್ರದೇಶದಲ್ಲಿ ಮಳೆಯಿಂದ ಸಂಭವಿಸಿದ ಅನಾಹುತದಲ್ಲಿ 18 ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ 8 ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಇಬ್ಬರು ಹಾವು ಕಚ್ಚಿ ಸತ್ತಿದ್ದಾರೆ.

ನಿರಂತರ ಮಳೆಯಿಂದ ರಾಜಸ್ಥಾನದ ಅಜ್ಮೇರ್, ಪುಷ್ಕರ್, ಬುಂಡಿ, ಸವಾಯಿ ಮಾಧೋಪುರ ಹಾಗೂ ಪಾಲಿ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ.

ಅಜ್ಮೇರ್ ದರ್ಗಾದ ಸುತ್ತಲೂ ನೀರು ತುಂಬಿದ್ದು, ಹಲವಾರು ಮಂದಿ ನೀರಿನಲ್ಲಿ ಕೊಚ್ಚಿಹೋಗುವ ವೇಳೆ ಸ್ಥಳೀಯರು ರಕ್ಷಿಸಿದರು.

ಜುಲೈ 27ರಿಂದ 28ರವರೆಗೆ ರಾಜಸ್ಥಾನದ ಪೂರ್ವ ಭಾಗದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ. ಉತ್ತರಾಖಂಡದ ಕುಮಾಂವ್ ಭಾಗದಲ್ಲಿ ಭಾನುವಾರದವರೆಗೂ ಧಾರಾಕಾರ ಮಳೆಯಾಗಲಿದ್ದು, ‘ರೆಡ್ ಅಲರ್ಟ್’ ಘೋಷಿಸಲಾಗಿದೆ.

ಮಳೆ ಕಾರಣದಿಂದ ಹಿಮಾಲಯದ ಮೇಲ್ಭಾಗದ ಪ್ರದೇಶಗಳಿಗೆ ತೆರಳದಂತೆ ಪ್ರವಾಸಿಗರಿಗೆ ಸೂಚನೆ ನೀಡಲಾಗಿದೆ.

ರಸ್ತೆಗಳು ಬಂದ್: ಹಿಮಾಚಲ ಪ್ರದೇಶದ ಬಿಲಾಸ್ಪುರ್, ಹಮೀರ್ಪುರ್, ಕಾಂಗ್ರಾ, ಕುಲ್ಲು, ಮಂಡಿ, ಶಿಮ್ಲಾ ಹಾಗೂ ಸೋಲಾನ್ ಜಿಲ್ಲೆಗಳಲ್ಲಿ ಶುಕ್ರವಾರದಿಂದಲೂ ವ್ಯಾಪಕ ಮಳೆಯಾಗುತ್ತಿದೆ.

‘ಮಳೆ ಅನಾಹುತದಿಂದ ರಾಜ್ಯದಲ್ಲಿ 141 ರಸ್ತೆಗಳು ಮುಚ್ಚಿದ್ದು, 58 ನೀರು ಪೂರೈಕೆ ಯೋಜನೆ ಹಾಗೂ 28 ವಿದ್ಯುತ್ ವಿತರಣಾ ಘಟಕಗಳಿಗೆ ತೀವ್ರ ಹಾನಿಯುಂಟಾಗಿದೆ’ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.