ಮುಂಬೈ: ದೇಶದಲ್ಲಿ ಉದ್ಭವಿಸಿರುವ ಎಲ್ಪಿಜಿ ಬಿಕ್ಕಟ್ಟಿನ ಕಾರಣಕ್ಕೆ ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ ವಿರೋಧ ಪಕ್ಷಗಳ ಒಕ್ಕೂಟ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ನಡುವೆ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂದೆ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

‘ಈ ಸಂದರ್ಭದಲ್ಲಿ ಶಿವಸೇನೆ ನಿಮ್ಮ ಬೆಂಬಲಕ್ಕೆ ನಿಲ್ಲಲಿದೆ’ ಎಂದು ಅವರು ಭರವಸೆ ನೀಡಿದ್ದಾರೆ.

ಇದೇ ವೇಳೆ ಶಿವಸೇನಾ ಸಂಸದರನ್ನು ಭೇಟಿ ಮಾಡಿ, ವಿರೋಧ ಪಕ್ಷಗಳ ಆರೋಪಗಳಿಗೆ ತಕ್ಕ ಉತ್ತರ ನೀಡುವಂತೆ ಅವರಲ್ಲಿ ಮನವಿ ಮಾಡಿದ್ದಾರೆ.

ಎರಡು ದಿನಗಳ ದೆಹಲಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿರುವ ಶಿಂದೆ ಅವರು, ಇಬ್ಬರೊಂದಿಗೂ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ. ಮಹಾರಾಷ್ಟ್ರಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ದೆಹಲಿ ಪ್ರವಾಸದ ನಂತರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಏಕನಾಥ ಶಿಂದೆ, ‘ಎನ್ಡಿಎ ಒಕ್ಕೂಟದ ಮೌಲ್ಯಯುತ ಮಿತ್ರಪಕ್ಷವಾದ ಶಿವಸೇನೆ, ಈ ನಿರ್ಣಾಯಕ ಸಮಯದಲ್ಲಿ ಪ್ರಧಾನಿ ಮತ್ತು ರಾಷ್ಟ್ರದೊಂದಿಗೆ ದೃಢವಾಗಿ ನಿಲ್ಲಲಿದೆ’ ಎಂದು ಹೇಳಿದರು. ರಾಷ್ಟ್ರೀಯ ಹಿತಾಸಕ್ತಿಗಳನ್ನು ರಕ್ಷಿಸುವಲ್ಲಿ ಭಾರತ ಸರ್ಕಾರದ ನಿಲುವನ್ನು ಪಕ್ಷವು ಸಂಪೂರ್ಣವಾಗಿ ಬೆಂಬಲಿಸುತ್ತದೆ’ ಎಂದು ಅವರು ಪುನರುಚ್ಚರಿಸಿದರು.

‘ಯುದ್ಧದಂತಹ ಪರಿಸ್ಥಿತಿಯಲ್ಲಿ ತಪ್ಪು ಮಾಹಿತಿ ಹರಡುವುದು ಮತ್ತು ರಾಜಕೀಯ ವ್ಯಾಖ್ಯಾನದಲ್ಲಿ ತೊಡಗುವುದು ದುರದೃಷ್ಟಕರ ಮತ್ತು ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿದೆ’ ಎಂದು ಹೇಳುವ ಮೂಲಕ ಶಿಂದೆ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ತೀವ್ರವಾಗಿ ಟೀಕಿಸಿದರು. ‘ಪಾಕಿಸ್ತಾನ ಸೇರಿದಂತೆ ವಿದೇಶಿ ಮಾಧ್ಯಮಗಳ ಗಮನ ಸೆಳೆಯಲು ಇಂಥ ಹೇಳಿಕೆಗಳನ್ನು ನೀಡಲಾಗುತ್ತಿದೆ’ ಎಂದೂ ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.