ಠಾಣೆ: ಮಗಳಿಗೆ ಲೈಂಗಿಕ ಕಿರುಕುಳ ನೀಡಿದ 64 ವರ್ಷದ ತಂದೆಯ ವಿರುದ್ಧ ಮಹಾರಾಷ್ಟ್ರದ ಠಾಣೆ ಜಿಲ್ಲೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
18 ವರ್ಷದ ಯುವತಿ ತನ್ನ ತಂದೆಯ ವಿರುದ್ಧ ನೀಡಿರುವ ದೂರಿನಲ್ಲಿ, ‘ಜುಲೈ 5ರಂದು ಮನೆಯಲ್ಲಿ ಯಾರೂ ಇಲ್ಲದಾಗ, ಅಪ್ಪ ಬಲವಂತವಾಗಿ ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ’ ಎಂದು ಉಲ್ಲೇಖಿಸಿದ್ದಾರೆ ಎಂದು ವರ್ತಕ್ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.