ಶಿವಪುರಿ: ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ಗುಡಿಸಲಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 65 ವರ್ಷದ ವ್ಯಕ್ತಿ ಮತ್ತು ಅವರ ಇಬ್ಬರು ಮೊಮ್ಮಕ್ಕಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೈರಾದ್ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮೀಪುರ ಗ್ರಾಮದಲ್ಲಿ ಶನಿವಾರ ರಾತ್ರಿ 11.30ರ ಸುಮಾರಿಗೆ ಅವಘಡ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಚಳಿಯ ವಾತಾವರಣವಿದ್ದರಿಂದ ಬೆಂಕಿ ಕಾಯಲು ಹೊತ್ತಿಸಲಾದ ಸ್ಟೌವ್ನಿಂದ ಗುಡಿಸಲಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಬೈರಾದ್ ಪೊಲೀಸ್ ಠಾಣೆ ಪ್ರಭಾರಿ ವಿಕಾಸ್ ಯಾದವ್ ತಿಳಿಸಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಹಜಾರಿ ಬಂಜಾರ (65) ಮತ್ತು ಅವರ ಮೊಮ್ಮಗಳು ಸಂಧ್ಯಾ (10) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಮತ್ತೊಬ್ಬ ಮೊಮ್ಮಗಳು ಅನುಷ್ಕಾ (5) ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.