ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ಬಾಂಡ್‌ ರದ್ದು: ಸುಪ್ರೀಂ ಕೋರ್ಟ್‌ ತೀರ್ಪು ಮಹತ್ವದ್ದಾಗಿದೆ– ಮಾಯಾವತಿ

Published 18 ಮಾರ್ಚ್ 2024, 13:32 IST
Last Updated 18 ಮಾರ್ಚ್ 2024, 13:32 IST
ಅಕ್ಷರ ಗಾತ್ರ
ADVERTISEMENT

ಲಖನೌ: ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಲು ನಿರಂತರ ಪ್ರಯತ್ನಗಳು ಅಗತ್ಯ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಅಧ್ಯಕ್ಷೆ ಮಾಯಾವತಿ ಸೋಮವಾರ ಹೇಳಿದ್ದಾರೆ.

ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ಶ್ಲಾಘಿಸಿ, ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

’ತಮ್ಮ ಪಕ್ಷವು ದೊಡ್ಡ ಬಂಡವಾಳಶಾಹಿಗಳ ಹಾಗೂ ಶ್ರೀಮಂತರ ಹಣದ ಬಲವನ್ನು ಬಳಸುವ ಪ್ರಕ್ರಿಯೆಯಿಂದ ದೂರವಿತ್ತು. ಅಧಿಕಾರದಲ್ಲಿದ್ದಾಗ ಬಡ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಕೆಲಸ ಮಾಡಿದೆ ಎಂದರು. ಆದರೆ ಪ್ರತಿಪಕ್ಷಗಳು ಸ್ವಾರ್ಥಕ್ಕಾಗಿಯೇ ಕೆಲಸ ಮಾಡುತ್ತಿವೆ‘ ಎಂದು ವಾಗ್ದಾಳಿ ನಡೆಸಿದ್ದಾರೆ.

ದೇಶದಲ್ಲಿ ಬಹುಜನ ಸ್ನೇಹಿ ಸರ್ಕಾರ ರಚನೆಯಾದಾಗ ಮಾತ್ರ ಜನರು ಹಣದುಬ್ಬರ, ಹೆಚ್ಚುತ್ತಿರುವ ಬಡತನ, ನಿರುದ್ಯೋಗ ಮತ್ತು ಹಿಂದುಳಿದಿರುವಿಕೆಯಿಂದ ಮುಕ್ತರಾಗಲು ಸಾಧ್ಯವಾಗುತ್ತದೆ ಎಂದು ಪುನರುಚ್ಚರಿದರು.

ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರಗಳನ್ನು ಇದೇ ತಿಂಗಳು ಮಾರ್ಚ್ 21ರೊಳಗೆ ಬಿಡುಗಡೆ ಮಾಡಬೇಕು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಕ್ಕೆ (ಎಸ್‌ಬಿಐ) ಸುಪ್ರೀಂ ಕೋರ್ಟ್‌ ತಾಕೀತು ಮಾಡಿದೆ.

ರಾಜಕೀಯ ಪಕ್ಷಗಳಿಗೆ ಚುನಾವಣಾ ಬಾಂಡ್ ಮೂಲಕ ದೇಣಿಗೆ ನೀಡುವುದು ಅಸಾಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ಗುರುವಾರ ಐತಿಹಾಸಿಕ ತೀರ್ಪು ನೀಡಿದೆ. ಇದು ಸಂವಿಧಾನದ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ಮಾಹಿತಿಯ ಹಕ್ಕಿಗೆ ವಿರುದ್ಧವಾದುದು ಎಂದು ಹೇಳಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT