ನವದೆಹಲಿ: ರಾಜಕೀಯ ಪಕ್ಷಗಳಿಗೆ ಚುನಾವಣಾ ಬಾಂಡ್ ರೂಪದಲ್ಲಿ ಸಂದಾಯವಾದ ₹16,518 ಕೋಟಿ ಮುಟ್ಟುಗೋಲು ಹಾಕಿಕೊಳ್ಳುವಂತೆ ಕೋರಿ ಸಲ್ಲಿಕೆಯಾದ ಅರ್ಜಿಯ ಮರುಪರಿಶೀಲನೆಗೆ ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ

2024ರ ಆಗಸ್ಟ್ 2ರ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಖೇಮ್ ಸಿಂಗ್ ಭಾಟಿ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠವು ವಜಾಗೊಳಿಸಿದೆ.

ಯೋಜನೆಯಡಿಯಲ್ಲಿ ಪಡೆದ ಹಣವನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಈ ಹಿಂದೆಯೂ ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು.

ಪರಿಶೀಲನಾ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ಮಾರ್ಚ್ 26ರ ತೀರ್ಪಿನಲ್ಲಿ ತಿಳಿಸಲಾಗಿದೆ. ಸುಪ್ರೀಂ ಕೋರ್ಟ್ ಆದೇಶ ಪ್ರತಿ ಇದೀಗ ಲಭ್ಯವಾಗಿದ್ದು, ಭಾಟಿ ಮನವಿಯನ್ನು ಪುರಸ್ಕರಿಸಲು ಕೋರ್ಟ್ ತಿರಸ್ಕರಿಸಿದೆ.

ಕಳೆದ ವರ್ಷ ಫೆಬ್ರುವರಿ 15ರಂದು ಮಾಜಿ ಸಿಜೆಐ ಡಿ ವೈ ಚಂದ್ರಚೂಡ್ ನೇತೃತ್ವದ ಐದು ನ್ಯಾಯಊರ್ತಿಗಳನ್ಗೊಳಗೊಂಡ ಸಂವಿಧಾನ ಪೀಠವು ಬಿಜೆಪಿ ಸರ್ಕಾರ ಪರಿಚಯಿಸಿದ್ದ ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿತ್ತು.

ಸುಪ್ರೀಂ ಕೋರ್ಟ್ನ ತೀರ್ಪಿನ ನಂತರ, ಈ ಯೋಜನೆಯಡಿಯಲ್ಲಿ ಅಧಿಕೃತ ಹಣಕಾಸು ಸಂಸ್ಥೆಯಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಚುನಾವಣಾ ಆಯೋಗದೊಂದಿಗೆ ಡೇಟಾವನ್ನು ಹಂಚಿಕೊಂಡಿತ್ತು. ಬಳಿಕ, ಅದನ್ನು ಸಾರ್ವಜನಿಕಗೊಳಿಸಲಾಗಿತ್ತು.

ರಾಜಕೀಯ ನಿಧಿಯಲ್ಲಿ ಪಾರದರ್ಶಕತೆಯನ್ನು ತರುವ ಪ್ರಯತ್ನಗಳ ಭಾಗವಾಗಿ ನಗದು ದೇಣಿಗೆಗೆ ಪರ್ಯಾಯವಾಗಿ 2018ರ ಜನವರಿ 2ರಂದು ಸರ್ಕಾರವು ಅಧಿಸೂಚನೆ ಮೂಲಕ ಚುನಾವಣಾ ಬಾಂಡ್ ಯೋಜನೆಯನ್ನು ಜಾರಿಗೆ ತಂದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.