ನವದೆಹಲಿ:ಬಿಹಾರ ಚುನಾವಣೆಯು ಮೂರು ಹಂತಗಳಲ್ಲಿ ನಡೆಯಲಿದೆ. ಅ. 28ರಂದು ಮೊದಲ ಹಂತ, ನ.3 ರಂದು ಎರಡನೇ ಹಂತ, ನ.7ರಂದು ಮೂರನೇ ಹಂತದ ಮತದಾನ ನಡೆಯಲಿದ್ದು, ನ. 10ರಂದು ಫಲಿತಾಂಶ ಪ್ರಕಟವಾಗಲಿದೆ.

243 ಸದಸ್ಯ ಬಲದಬಿಹಾರ ವಿಧಾನಸಭಾ ಚುನಾವಣೆಯ ಹಂತಗಳನ್ನು ಭದ್ರತಾ ವ್ಯವಸ್ಥೆ, ಹಬ್ಬದ ಋತುಗಳನ್ನು ಗಮನದಲ್ಲಿಟ್ಟುಕೊಂಡು ಕಡಿಮೆ ಮಾಡಲಾಗಿದೆ.

ಬಿಹಾರದಲ್ಲಿ ಮಾದರಿ ನೀತಿ ಸಂಹಿತೆ (ಎಂಸಿಸಿ) ಇಂದಿನಿಂದಲೇ ಜಾರಿಯಾಗಿದೆ. ಎಂಸಿಸಿ ಮಾರ್ಗಸೂಚಿಗಳ ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಆಯೋಗವು ಈಗಾಗಲೇ ಸಕಲ ವ್ಯವಸ್ಥೆಗಳನ್ನು ಮಾಡಿದೆ.

ಮತದಾನದ ಸಮಯವನ್ನು ಸಂಜೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ. ಕೋವಿಡ್ ರೋಗಿಗಳು ದಿನದ ಕೊನೆಯ ಗಂಟೆಯಲ್ಲಿ ಮತ ಚಲಾಯಿಸಲು ಅವಕಾಶ ನೀಡಲಾಗಿದೆ.

7 ಲಕ್ಷ ಹ್ಯಾಂಡ್ ಸ್ಯಾನಿಟೈಸರ್, 46 ಲಕ್ಷ ಮಾಸ್ಕ್, 6 ಲಕ್ಷ ಪಿಪಿಇ ಕಿಟ್, 6.7 ಲಕ್ಷ ಫೇಸ್ ಶೀಲ್ಡ್, 23 ಲಕ್ಷ ಜೋಡಿ ಕೈಗವಸುಗಳನ್ನು ಆಯೋಗವು ಚುನಾವಣೆಗಾಗಿ ವ್ಯವಸ್ಥೆ ಮಾಡಿಕೊಂಡಿದೆ.

ಅಗತ್ಯವಿರುವ ಕಡೆ ಮತ್ತು ವಿನಂತಿಸಿದ ಕಡೆಗಳಲ್ಲಿ ಅಂಚೆ ಮತಪತ್ರ ಸೌಲಭ್ಯವನ್ನು ಒದಗಿಸಲಾಗುತ್ತದೆ.

ಸಾಮಾಜಿಕ ಮಾಧ್ಯಮ ಸಂಸ್ಥೆಗಳು ತಮ್ಮ ವೇದಿಕೆ ದುರುಪಯೋಗವುದನ್ನು ತಡೆಯಲು ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು. ಅಂಥ ಸಮಸ್ಯೆಗಳು ಉದ್ಭವಿಸಿದಾಗ ಅದನ್ನು ನಿಭಾಯಿಸಲು ಕಟ್ಟುನಿಟ್ಟಾದ ಶಿಷ್ಟಾಚಾರ ಅಳವಡಿಸಿಕೊಳ್ಳಬೇಕು ಎಂದು ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.