ನವದೆಹಲಿ: ಎರಡು ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿಸಿದ್ದಾರೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಇಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ದೆಹಲಿ ಜಿಲ್ಲಾ ಚುನಾವಣಾ ಅಧಿಕಾರಿ ‘ಎಕ್ಸ್’ನಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ. ನೋಟಿಸ್ ಪ್ರಕಾರ, ನವದೆಹಲಿ ಮತ್ತು ಜಂಗಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಖೇರಾ ಅವರು ಹೆಸರು ಮತದಾರರ ಪಟ್ಟಿಗಳಲ್ಲಿದೆ.

‘ಎರಡು ಕ್ಷೇತ್ರಗಳಲ್ಲಿ ಹೆಸರು ಸೇರ್ಪಡೆ 1950ರ ಜನತಾ ಪ್ರಾತಿನಿಧ್ಯ ಕಾಯ್ದೆಯಡಿ ಅಪರಾಧ. ಆದ್ದರಿಂದ ನಿಮ್ಮ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು ಎಂಬುದನ್ನು ಸೆಪ್ಟೆಂಬರ್ 8ರ ಬೆಳಿಗ್ಗೆ 11 ಗಂಟೆಯೊಳಗೆ ತಿಳಿಸಿ’ ಎಂದು ನೋಟಿಸ್ನಲ್ಲಿ ಸೂಚಿಸಲಾಗಿದೆ.

ಈ ಕುರಿತು ಖೇರಾ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

‘ಖೇರಾ ಎರಡು ಮತದಾರರ ಗುರುತಿನ ಚೀಟಿ ಹೊಂದಿದ್ದಾರೆ ಮತ್ತು ರಾಹುಲ್ ಗಾಂಧಿ ತಮ್ಮ ಪಕ್ಷದ ಮತ ಕಳವು ‘ರಕ್ಷಿಸಲು ಮತ್ತು ಮುಚ್ಚಿಹಾಕಲು’ ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ ವಿರುದ್ಧ ಅಭಿಯಾನ ನಡೆಸುತ್ತಿದ್ದಾರೆ’ ಎಂದು ಬಿಜೆಪಿ ಮಂಗಳವಾರ ಟೀಕಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.