ನವದೆಹಲಿ: ಪ್ರಸ್ತುತ ಚುನಾವಣಾ ಆಯುಕ್ತರಾಗಿರುವ ಸುಶೀಲ್ ಚಂದ್ರ ಅವರು ಮುಂದಿನ ಮುಖ್ಯ ಚುನಾವಣಾ ಆಯುಕ್ತರಾಗಿ (ಸಿಇಸಿ) ನೇಮಕಗೊಳ್ಳಲಿದ್ದಾರೆ ಎಂದು ಮೂಲಗಳು ಭಾನುವಾರ ತಿಳಿಸಿವೆ.

ಚುನಾವಣಾ ಆಯೋಗದ ಅತ್ಯಂತ ಹಿರಿಯ ಆಯುಕ್ತರನ್ನೇ ಸಿಇಸಿ ಹುದ್ದೆಗೆ ನೇಮಕ ಮಾಡುವ ಪರಿಪಾಟ ಇದೆ. ಹೀಗಾಗಿ ಸುಶೀಲ್ ಚಂದ್ರ ಅವರನ್ನೆ ಸಿಇಸಿಯನ್ನಾಗಿ ನೇಮಕ ಮಾಡುವುದಕ್ಕೆ ಸರ್ಕಾರ ಹಸಿರುನಿಶಾನೆ ತೋರಿದೆ ಎನ್ನಲಾಗಿದೆ. ಯಾವುದೇ ಸಮಯದಲ್ಲಿ ಈ ಕುರಿತ ಆದೇಶ ಹೊರಬೀಳಲಿದೆ ಎಂದು ಇವೇ ಮೂಲಗಳು ಹೇಳಿವೆ.

ಮುಖ್ಯ ಚುನಾವಣಾ ಆಯುಕ್ತರಾಗಿರುವ ಸುನೀಲ್ ಅರೋರಾ ಅವರ ಅವಧಿ ಏಪ್ರಿಲ್ 13ರಂದು ಮುಗಿಯಲಿದ್ದು, ಅಂದೇ ಸುಶೀಲ್ ಚಂದ್ರ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.