ನವದೆಹಲಿ: ದೇಶದಲ್ಲಿ ಚುನಾವಣೆ ಘೋಷಣೆಯಾಗಿರುವ ರಾಜ್ಯಗಳಲ್ಲಿ ಇಂಧನ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರು ಬಿಜೆಪಿಯನ್ನು ಸೋಲಿಸಲಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಕಚ್ಚಾ ತೈಲ ಬೆಲೆಯೂ ಇಳಿಕೆಯಾಗಿದ್ದರೂ ಕೇಂದ್ರ ಸರ್ಕಾರ ಇಂಧನದ ಮೇಲೆ ತೆರಿಗೆ ಹೆಚ್ಚಿಸಿ ಜನರ ಹಣವನ್ನು ಲೂಟಿ ಮಾಡುವಲ್ಲಿ ನಿರತವಾಗಿದೆ ಎಂದು ಕಿಡಿಕಾರಿದ್ದಾರೆ.