ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Election Results | ತೆಲಂಗಾಣ: ಕಾಂಗ್ರೆಸ್, ಬಿಜೆಪಿ ಸಮಾನ ಸಾಧನೆ

Published 4 ಜೂನ್ 2024, 23:49 IST
Last Updated 4 ಜೂನ್ 2024, 23:49 IST
ಅಕ್ಷರ ಗಾತ್ರ

ಹೈದರಾಬಾದ್: ತೆಲಂಗಾಣದಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಹಾಗೂ ಬಿಜೆಪಿ ಸಮಾನ ಸಾಧನೆ ಮಾಡಿದ್ದರೆ, ವಿರೋಧ ಪಕ್ಷವಾದ ಬಿಆರ್‌ಎಸ್‌ ದೂಳೀಪಟವಾಗಿದೆ.     

2019ರ ಚುನಾವಣೆಯಲ್ಲಿ ಕೆ.ಚಂದ್ರಶೇಖರ ರಾವ್ ಅವರ ಬಿಆರ್‌ಎಸ್ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದಿತ್ತು. 17 ಕ್ಷೇತ್ರಗಳ ಪೈಕಿ ಬಿಆರ್‌ಎಸ್‌ 9 ಸ್ಥಾನಗಳನ್ನು ತನ್ನದಾಗಿಸಿಕೊಂಡಿತ್ತು. ಈ ಬಾರಿ ಬಿಆರ್‌ಎಸ್‌ ಸಂಪೂರ್ಣವಾಗಿ ನೆಲ ಕಚ್ಚಿದೆ. ಕನಿಷ್ಠ ಒಂದು ಕ್ಷೇತ್ರದಲ್ಲೂ ಗೆಲುವು ಸಾಧಿಸಿಲ್ಲ. ಕಳೆದ ಬಾರಿ ಬಿಜೆಪಿ ರಾಜ್ಯದಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಈ ಬಾರಿ ತನ್ನ ಬಲ ವೃದ್ಧಿಸಿಕೊಂಡಿರುವ ಬಿಜೆಪಿ, 8 ಸ್ಥಾನ ಗೆದ್ದಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಮೂರು ಸ್ಥಾನ ಗೆದ್ದಿದ್ದ ಕಾಂಗ್ರೆಸ್, ಈ ಬಾರಿ 8ರಲ್ಲಿ ಜಯ ದಾಖಲಿಸಿದೆ.

ಹೈದರಾಬಾದ್ ಕ್ಷೇತ್ರದಲ್ಲಿ ಎಐಎಂಐಎಂ ತನ್ನ ನೆಲೆ ಉಳಿಸಿಕೊಂಡಿದೆ. ಈ ಕ್ಷೇತ್ರದಲ್ಲಿ ಎಐಎಂಐಎಂನ ಅಸಾದುದ್ದೀನ್ ಒವೈಸಿ ಅವರಿಗೆ ಬಿಜೆಪಿಯ ಮಾಧವಿ ಲತಾ ಅವರು ತೀವ್ರ ಪೈಪೋಟಿ ನೀಡಿದ್ದರು. ಒವೈಸಿ ಮತ್ತೊಮ್ಮೆ ಗೆಲ್ಲುವ ಮೂಲಕ ತಕ್ಷೇತ್ರ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಗೆಲುವಿನ ಓಟ ಮುಂದುವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT