ನವದೆಹಲಿ: ದೇಶದಲ್ಲಿ ಮೂಡಿರುವ ಕೋವಿಡ್ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಪಕ್ಷದ ನೂತನ ಅಧ್ಯಕ್ಷರ ಆಯ್ಕೆಗೆ ಚುನಾವಣೆಯನ್ನು ಮುಂದೂಡಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸೋಮವಾರ ತೀರ್ಮಾನಿಸಿದೆ.

ನೂತನ ಅಧ್ಯಕ್ಷರ ಆಯ್ಕೆಗೆ 2021ರ ಜೂನ್‌ನಲ್ಲಿ ನಡೆಸಲು ಪಕ್ಷ ನಿರ್ಧರಿಸಿತ್ತು. ಮಧುಸೂಧನ್ ಮಿಸ್ತ್ರಿ ನೇತೃತ್ವದ ಪಕ್ಷದ ಕೇಂದ್ರ ಚುನಾವಣಾ ಪ್ರಾಧಿಕಾರವು ಜೂನ್ 23ರಂದು ಚುನಾವಣೆ ನಡೆಸಲು ನಿರ್ಧರಿಸಿತ್ತು. ಆದರೆ, ಈಗಿನ ಪರಿಸ್ಥಿತಿ ಹಿನ್ನೆಲೆಯಲ್ಲಿ ಚುನಾವಣೆ ನಡೆಸುವುದು ಸೂಕ್ತವಲ್ಲ ಎಂದು ಹೆಚ್ಚಿನ ಮುಖಂಡರು ಪ್ರತಿಪಾದಿಸಿದ್ದರು.

ಪ್ರಸ್ತುತ ಸನ್ನಿವೇಶದಲ್ಲಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಬಾರದು ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಪ್ರಸ್ತಾಪಿಸಿದರೆ, ಹಿರಿಯ ಮುಖಂಡ ಗುಲಾಂ ನಬಿ ಅಜಾದ್ ಇದನ್ನು ಅನುಮೋದಿಸಿದ್ದಾರೆ.

ಪಕ್ಷದ ಸಾಂಸ್ಥಿಕ ಚುನಾವಣೆಗೆ ಈ ಹಿಂದೆ ಆಗ್ರಹಪಡಿಸಿದ್ದ 23 ಜನರ ನಾಯಕರಲ್ಲಿ ಅಜಾದ್ ಒಬ್ಬರು. ದೇಶದ ಪ್ರಸ್ತತ ಸನ್ನಿವೇಶದಲ್ಲಿ ಪಕ್ಷದಲ್ಲಿನ ಯಾರೊಬ್ಬರು ಚುನಾವಣೆಯನ್ನು ಬಯಸುತ್ತಿಲ್ಲ. ಹೀಗಾಗಿ, ಚುನಾವಣೆ ಮುಂದೂಡಲು ಸರ್ವಾನುಮತದಿಂದ ತೀರ್ಮಾನಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈಗಿನ ವೇಳಾಪಟ್ಟಿ ಪ್ರಕಾರ, ಜೂನ್ 23ರಕ್ಕೆ ಚುನಾವಣೆ, 24ಕ್ಕೆ ಮತಎಣಿಕೆ ನಡೆಯಬೇಕಿತ್ತು. ಜೂನ್ 1ರಂದು ಅಧಿಸೂಚನೆ ಹೊರಡಿಸಿ, ನಾಮಪತ್ರಗಳನ್ನು ಜೂನ್ 2 ರಿಂದ7ರವರೆಗೆ ಸ್ವೀಕರಿಸಲು ನಿರ್ಧರಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.