ನವದೆಹಲಿ: ಚುನಾವಣಾ ಬಾಂಡ್ಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರಗಳನ್ನು ಇದೇ ತಿಂಗಳು ಮಾರ್ಚ್ 21ರೊಳಗೆ ಬಿಡುಗಡೆ ಮಾಡಬೇಕು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಕ್ಕೆ (ಎಸ್ಬಿಐ) ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ.

ಬಾಂಡ್ಗಳಿಗೆ ಸಂಬಂಧಿಸಿದ ವಿವರವನ್ನು ಬಿಡುಗಡೆಗೊಳಿಸಬೇಕೆಂಬ ಅಗತ್ಯತೆಯಲ್ಲಿ ಯಾವುದೇ ಸಂದೇಹವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ನೇತೃತ್ವದ ಐವರು ನ್ಯಾಯಾಧೀಶರ ಪೀಠವು ಸೋಮವಾರ ಹೇಳಿದೆ.

ಯೂನಿಕ್ ಬಾಂಡ್ ನಂಬರ್ಗಳನ್ನೂ ಒಳಗೊಂಡಂತೆ ಎಲ್ಲ ವಿವರಗಳನ್ನು ಎಸ್ಬಿಐ ಅಧ್ಯಕ್ಷ ಮಾರ್ಚ್ 21 ಸಂಜೆ 5ರೊಳಗೆ ಅಫಿಡಿವಿಟ್ ಮೂಲಕ ಕೋರ್ಟ್ಗೆ ಸಲ್ಲಿಸಬೇಕು ಎಂದು ತಿಳಿಸಿದೆ.

ಯೂನಿಕ್ ಬಾಂಡ್ ನಂಬರ್ ವಿವರಗಳು ಬಾಂಡ್ ಖರೀದಿಸಿದವರು ಪಡೆದವರು ಯಾರು ಎಂಬ ವಿವರಗಳನ್ನು ಸ್ಪಷ್ಟವಾಗಿ ಒಳಗೊಂಡಿರುತ್ತವೆ.
.ಪುಟಿನ್ ಮತ್ತೆ 6 ವರ್ಷ ಅಧ್ಯಕ್ಷ: ರಷ್ಯಾ ಅಧ್ಯಕ್ಷೀಯ ಚುನಾವಣೆ ಹೇಗೆ ನಡೆಯುತ್ತೆ?.ಚುನಾವಣಾ ಬಾಂಡ್: ಬಿಜೆಪಿಗೆ ₹6,987 ಕೋಟಿ ದೇಣಿಗೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.