ನವದೆಹಲಿ: ‘ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಶೀಲನೆಯನ್ನು ವಿರೋಧಿಸಲು ಪ್ರತಿಪಕ್ಷಗಳು ಒಗ್ಗಟ್ಟಾಗಿವೆ. ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನ್ಯಾಯ ಒದಗಿಸುತ್ತದೆ ಎಂಬ ಪೂರ್ಣ ವಿಶ್ವಾಸ ನಮಗಿದೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸೋಮವಾರ ಹೇಳಿದ್ದಾರೆ.

ಚುನಾವಣೆ ಹೊಸ್ತಿಲಿನಲ್ಲಿರುವಂತೆಯೇ ಮತದಾರರ ಪಟ್ಟಿ ಪರಿಶೀಲನೆಗೆ ಮುಂದಾಗಿರುವ ಚುನಾವಣಾ ಆಯೋಗದ ಕ್ರಮವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ 9 ಪಕ್ಷಗಳ ಜತೆಗೆ ಕಾಂಗ್ರೆಸ್ ಕೂಡ ಸೋಮವಾರ ಸೇರ್ಪಡೆಯಾಗಿದೆ. ಕಾಂಗ್ರೆಸ್ನ ಪರವಾಗಿ ತಾವು ಸುಪ್ರೀಂ ಕೋರ್ಟ್ ಮೊರೆಹೋಗುವುದಾಗಿ ವೇಣುಗೋಪಾಲ್ ತಿಳಿಸಿದ್ದಾರೆ.

ಈ ಬಗ್ಗೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಮತದಾರರ ಪಟ್ಟಿ ಪರಿಶೀಲನೆಯ ವಿಚಾರವು ಬಿಹಾರದ ನಗರಗಳು, ಗ್ರಾಮಗಳಲ್ಲಿ ಅವ್ಯವಸ್ಥೆ ಉಂಟುಮಾಡಿದೆ. ಕೋಟ್ಯಂತರ ಮತದಾರರಲ್ಲಿ ತಮ್ಮ ಹಕ್ಕನ್ನು ಕಸಿದುಕೊಳ್ಳಬಹುದೆಂಬ ಆಂತಕ ಮೂಡಿದೆ. ಅಧಿಕಾರದಲ್ಲಿರುವವರ ಆದೇಶದ ಮೇರೆಗೆ ಚುನಾವಣಾ ಆಯೋಗ ನಡೆಸುತ್ತಿರುವ ಅತಿದೊಡ್ಡ ವಂಚನೆ ಇದಾಗಿದೆ. ಸುಪ್ರೀಂ ಕೋರ್ಟ್ ನ್ಯಾಯ ಒದಗಿಸುವ ವಿಶ್ವಾಸವೂ ನಮಗಿದೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.