ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಇಂದು 2024 ನೇ ಸಾಲಿನ ಸಂಯೋಜಿತ ಆನೆ ಗಣತಿ ವರದಿಯನ್ನು ಬಿಡುಗಡೆ ಮಾಡಿದ್ದಾರೆ.

ಗಣತಿ ಪ್ರಕಾರ ಪ್ರಸ್ತುತ ತಮಿಳುನಾಡಿನಲ್ಲಿ 3,063 ಆನೆಗಳಿವೆ ಎಂದು ತಿಳಿದು ಬಂದಿದೆ. ಕಳೆದ ವರ್ಷ 2961 ಆನೆಗಳು ಇದ್ದವು ಎಂದು ಹೇಳಲಾಗಿತ್ತು. ಅಂದರೆ ಒಂದು ವರ್ಷದಲ್ಲಿ ಆನೆಗಳ ಸಂಖ್ಯೆಯಲ್ಲಿ 102 ಹೆಚ್ಚಳ ಕಂಡು ಬಂದಿದೆ.

2017 ರಲ್ಲಿ ತಮಿಳುನಾಡಿನಲ್ಲಿ 2,761 ಆನೆಗಳು ಕಂಡು ಬಂದಿದ್ದವು. ವರ್ಷದಿಂದ ವರ್ಷಕ್ಕೆ ಆನೆ ಸಂತತಿ ಹೆಚ್ಚುತ್ತಿರುವುದು ಸಂತಸದ ಸಂಗತಿ ಎಂದು ಸ್ಟಾಲಿನ್ ಹೇಳಿದ್ದಾರೆ.

2024 ರ ಮೇ ನಲ್ಲಿ ತಮಿಳುನಾಡು, ಕೇರಳ, ಕರ್ನಾಟಕ ಮತ್ತು ಆಂಧ್ರಪ್ರದೇಶವನ್ನು ಸಂಯೋಜಿಸಿ ಆನೆ ಗಣತಿ ನಡೆಸಲಾಗಿತ್ತು. ಈ ಗಣತಿ ಪ್ರಕಾರ ಈ ನಾಲ್ಕೂ ರಾಜ್ಯಗಳಲ್ಲಿ ಆನೆಗಳ ಸಂಖ್ಯೆ 14 ಸಾವಿರಕ್ಕೂ ಹೆಚ್ಚು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.