ಕಣ್ಣೂರು (ಕೇರಳ): ಕಾಡಾನೆಗಳು ಕಾಣಿಸಿಕೊಂಡಿರುವ ಕಾರಣ ಅಯ್ಯನ್ಕುನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂರು ವಾರ್ಡ್ಗಳಲ್ಲಿ ಸಾರ್ವಜನಿಕರು ಎರಡು ದಿನ ಗುಂಪು ಸೇರುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಬುಧವಾರ ಆದೇಶ ಹೊರಡಿಸಿದ್ದಾರೆ.

8, 9 ಮತ್ತು 10ನೇ ವಾರ್ಡ್ಗಳಲ್ಲಿ ಮಾ.5ರ ಬೆಳಿಗ್ಗೆ 10 ಗಂಟೆಯಿಂದ ಮಾರ್ಚ್ 6ರ ಸಂಜೆ 6 ಗಂಟೆವರೆಗೆ ಜನರು ಗುಂಪು ಸೇರಬಾರದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಈ ಮಧ್ಯೆ, ನಾಡಿಗೆ ಬಂದಿರುವ ಕಾಡಾನೆಗಳನ್ನು ವಾಪಸ್ ಕಳುಹಿಸಲು ಅರಣ್ಯ ಅಧಿಕಾರಿಗಳು ಹರಸಾಹಸ ಪಡುತ್ತಿರುವ ದೃಶ್ಯಗಳು ಮಾಧ್ಯಮಗಳಲ್ಲಿ ಬಿತ್ತರವಾಗಿವೆ.

ಫೆ.23ರಂದು ಕಾಡಾನೆ ದಾಳಿಯಿಂದ ದಂಪತಿ ಮೃತಪಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.