ಮುಂಬೈ (ಪಿಟಿಐ): ಎಲ್ಗಾರ್ ಪರಿಷತ್– ಮಾವೊ ನಡುವೆ ಸಂಪರ್ಕ ಪ್ರಕರಣದಲ್ಲಿ ಜೈಲಿನಲ್ಲಿರುವ ಸಾಮಾಜಿಕ ಕಾರ್ಯಕರ್ತ ಗೌತಮ್ ನವ್‌ಲಾಖ್ (70) ಅವರನ್ನು ಗೃಹ ಬಂಧನದಲ್ಲಿರಿಸಲು ಸುಪ್ರೀಂಕೋರ್ಟ್ ಅನುಮತಿ ನೀಡಿ ನಾಲ್ಕು ದಿನಗಳೇ ಕಳೆದರೂ, ಆ ಕುರಿತ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ.

2017–18ರಲ್ಲಿ ದಾಖಲಾದ ಎಲ್ಗಾರ್ ಪರಿಷತ್ ಪ್ರಕರಣ ಸಂಬಂಧ 2020ರ ಏಪ್ರಿಲ್‌ನಲ್ಲಿ ನವ್‌ಲಾಖ್ ಅವರನ್ನು ಬಂಧಿಸಲಾಗಿತ್ತು. ವಿವಿಧ ಕಾಯಿಲೆಗಳಿಂದ ನರಳುತ್ತಿರುವ ಅವರು ಗೃಹಬಂಧನಕ್ಕೆ ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಕುರಿತು ನವೆಂಬರ್ 10ರಂದು ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್, ಮುಂದಿನ 48 ಗಂಟೆಗಳಲ್ಲಿ ನವ್‌ಲಾಖ್ ಅವರನ್ನು ಒಂದು ತಿಂಗಳ ಮಟ್ಟಿಗೆ ಗೃಹಬಂಧನದಲ್ಲಿರಿಸುವಂತೆ ಆದೇಶಿಸಿತ್ತು. ಇದಕ್ಕೆ ಕೆಲ ಷರತ್ತುಗಳನ್ನು ವಿಧಿಸಿತ್ತು.

ಆದರೆ ಅವರ ಬಿಡುಗಡೆಗೆ ಸಂಬಂಧಿಸಿದಂತೆ ಪ್ರಕ್ರಿಯೆಗಳು ಪೂರ್ಣಗೊಳ್ಳದ ಕಾರಣ ಸೋಮವಾರ ಸಂಜೆಯವರೆಗೂ ಅವರು ಜೈಲಿನಲ್ಲಿಯೇ ಇದ್ದರು. ‘ನವ್‌ಲಾಖ್ ಅವರನ್ನು ಜೈಲಿನಿಂದ ಬಿಡುಗಡೆ ಮಾಡುವ ಸಂಬಂಧ ಮುಂಬೈನ ವಿಶೇಷ ಎನ್‌ಐಎ ನ್ಯಾಯಾಲಯದಲ್ಲಿ ಸೋಮವಾರ ಪ್ರಕ್ರಿಯೆಗಳು ಆರಂಭವಾಗಿವೆ’ ಎಂದು ಅವರ ವಕೀಲರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.