ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಗಾರ್‌ ಪರಿಷತ್ ಪ್ರಕರಣ: ಗೌತಮ್‌ ನವಲಖಾ ಗೃಹಬಂಧನ ಫೆ.17ರ ವರೆಗೆ ವಿಸ್ತರಣೆ

Last Updated 9 ಜನವರಿ 2023, 11:02 IST
ಅಕ್ಷರ ಗಾತ್ರ

ನವದೆಹಲಿ: ಎಲ್ಗಾರ್‌ ಪರಿಷತ್– ಮಾವೊ ಸಂಪರ್ಕ ಪ್ರಕರಣದ ಆರೋಪಿ ಸಾಮಾಜಿಕ ಕಾರ್ಯಕರ್ತ ಗೌತಮ್‌ ನವಲಖಾ ಅವರ ಗೃಹಬಂಧನದ ಅವಧಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ಫೆಬ್ರುವರಿ 17ರ ವರೆಗೆ ವಿಸ್ತರಿಸಿದೆ.

ನ್ಯಾಯಮೂರ್ತಿಗಳಾದ ಕೆ.ಎಂ. ಜೋಸೆಫ್‌ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ನ್ಯಾಯಪೀಠವು, ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಎಸ್‌.ವಿ. ರಾಜು ಅವರು ನ್ಯಾಯಾಲಯಕ್ಕೆ ಹಾಜರಾಗದ ಕಾರಣ ಈ ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ.

ಗೌತಮ್‌ ಅವರ ಪುತ್ರಿ ವಿದೇಶದಲ್ಲಿದ್ದು, ಆಕೆಯ ದೂರವಾಣಿ ಕರೆಯನ್ನು ಸ್ವೀಕರಿಸಲು ಅನುಮತಿ ನೀಡಬೇಕೆಂದು ಗೌತಮ್‌ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲೆ ನಿತ್ಯಾ ರಾಮಕೃಷ್ಣನ್ ಅವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಗೌತಮ್‌ ಅವರನ್ನು ಗೃಹಬಂಧನಕ್ಕೆ ಹಸ್ತಾಂತರಿಸಬೇಕೆಂದು ನವೆಂಬರ್‌ 18ರಂದು ಸುಪ್ರೀಂ ಕೋರ್ಟ್‌ ಆದೇಶಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT