ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ಸಂಸತ್ ಭವನ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವುದಾಗಿ ಟಿಡಿಪಿ ಹೇಳಿಕೆ

Published 25 ಮೇ 2023, 9:50 IST
Last Updated 25 ಮೇ 2023, 9:50 IST
ಅಕ್ಷರ ಗಾತ್ರ

ಅಮರಾವತಿ: ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವುದಾಗಿ ತೆಲುಗು ದೇಶಂ ಪಕ್ಷ (ಟಿಡಿಪಿ) ಗುರುವಾರ ತಿಳಿಸಿದೆ.

ನಮ್ಮ ಪಕ್ಷದ ರಾಜ್ಯಸಭಾ ಸಂಸದ ರವೀಂದ್ರ ಕುಮಾರ್ ಅವರಿಗೆ ಸೂಚನೆ ನೀಡಲಾಗಿದ್ದು ಅವರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಎಂದು  ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ಲೋಕಸಭಾ ಪ್ರಧಾನ ಕಾರ್ಯದರ್ಶಿ ಅವರಿಂದ ಆಹ್ವಾನ ಸ್ವೀಕರಿಸಲಾಗಿದೆ. ಈಗಾಗಲೇ ರವೀಂದ್ರ ಅವರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಚಂದ್ರಬಾಬು ನಾಯ್ಡು ಹೇಳಿದರು. ಪ್ರಸ್ತುತ ಟಿಡಿಪಿ ಪಕ್ಷ ಮೂವರು ಲೋಕಸಭಾ ಸಂಸದರು ಹಾಗೂ ಒಬ್ಬ ರಾಜ್ಯಸಭಾ ಸಂಸದರನ್ನು ಹೊಂದಿದೆ.

ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ತಮ್ಮ ಪಕ್ಷವು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದೆ ಎಂದು ಬುಧವಾರ ಹೇಳಿದ್ದರು.

ಕಾಂಗ್ರೆಸ್, ಟಿಎಂಸಿ ಹಾಗೂ ಎಡಪಕ್ಷಗಳು ಸೇರಿದಂತೆ ಕನಿಷ್ಠ 20 ವಿರೋಧ ಪಕ್ಷಗಳು ಸಂಸತ್‌ನ ನೂತನ ಭವನ ಉದ್ಘಾಟನಾ ಕಾರ್ಯಕ್ರಮವನ್ನು ಬಹಿಷ್ಕರಿಸುವುದಾಗಿ ಘೋಷಣೆ ಮಾಡಿವೆ. 

ದೆಹಲಿಯಲ್ಲಿ ಮೇ 28ರಂದು ನೂತನ ಸಂಸತ್‌ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT