ಶುಕ್ರವಾರ ರಾತ್ರಿ 10.36ಕ್ಕೆ ಬೆಂಗಳೂರಿಗೆ ಹೊರಟಿದ್ದ ಇಂಡಿಗೊ ವಿಮಾನದ(6ಇ0573) ಎಡಭಾಗದ ಎಂಜಿನ್ ವಿಫಲಗೊಂಡಿದ್ದರಿಂದ, ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾತ್ರಿ 10.53ಕ್ಕೆ ತುರ್ತು ಭೂಸ್ಪರ್ಶ ಮಾಡಲಾಯಿತು. ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದಾಗಿ ಯಾವುದೇ ವರದಿ ಬಂದಿಲ್ಲ ಎಂದು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ವಕ್ತಾರರು ಶನಿವಾರ ತಿಳಿಸಿದ್ದಾರೆ.