ನವದೆಹಲಿ: ಕೇಂದ್ರ ಸರ್ಕಾರದ ನೌಕರರು ಅಂಗಾಂಗ ದಾನ ಮಾಡಿದರೆ ಗರಿಷ್ಠ 42 ದಿನಗಳ ವಿಶೇಷ ಸಾಂದರ್ಭಿಕ ರಜೆ ಪಡೆಯಲು ಅವಕಾಶವಿದೆ ಎಂದು ಕೇಂದ್ರ ಸರ್ಕಾರ ಬುಧವಾರ ತಿಳಿಸಿದೆ.

ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಈ ಬಗ್ಗೆ ಲೋಕಸಭೆಯಲ್ಲಿ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ್ದಾರೆ.

‘ದಾನಿಗಳ ಅಂಗಾಂಗ ಪಡೆಯಲು ಯಾವುದೇ ರೀತಿಯ ಶಸ್ತ್ರಚಿಕಿತ್ಸೆ ಕೈಗೊಂಡಿದ್ದರೂ ಸರ್ಕಾರಿ ನೋಂದಾಯಿತ ವೈದ್ಯರ ಸಲಹೆಯಂತೆ ಈ ವಿಶೇಷ ಸಾಂದರ್ಭಿಕ ರಜೆಯ ಸೌಲಭ್ಯ ಕಲ್ಪಿಸಲಾಗಿದೆ’ ಎಂದು ವಿವರಿಸಿದ್ದಾರೆ.

‘ಈ ಬಗ್ಗೆ 2023ರಲ್ಲೇ ಸಿಬ್ಬಂದಿ ಸಚಿವಾಲಯ ಆದೇಶ ಹೊರಡಿಸಿದೆ. ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ದಿನದಿಂದಲೇ ವಿಶೇಷ ಸಾಂದರ್ಭಿಕ ರಜೆಯನ್ನು ಪಡೆದುಕೊಳ್ಳಬಹುದು. ಅಗತ್ಯವಿದ್ದರೆ ವೈದ್ಯರ ಶಿಫಾರಸಿನಂತೆ ಶಸ್ತ್ರಚಿಕಿತ್ಸೆಗಿಂತ ಒಂದು ವಾರ ಮುನ್ನ ರಜೆ ತೆಗೆದುಕೊಳ್ಳುವುದಕ್ಕೂ ಅವಕಾಶ ಇದೆ’ ಎಂದು ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.