ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಮಂಗಳವಾರ ಮುಂಜಾನೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಸದ್ಯ ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶ್ರೀನಗರದ ಕನೆಮಜಾರ್ ನವಕಾಡಲ್ ಪ್ರದೇಶದಲ್ಲಿ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದೆ. ಜಮ್ಮು ಮತ್ತು ಕಾಶ್ಮೀರದ ಪೊಲೀಸರುಮತ್ತು ಸಿಆರ್‌ಪಿಎಫ್ ಕಾರ್ಯಾಚರಣೆ ಕೈಗೊಂಡಿದೆ. ಹೆಚ್ಚಿನ ವಿವರಗಳಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ತಿಳಿಸಿದ್ದಾರೆ.

ಆ ಪ್ರದೇಶದಲ್ಲಿ ಭಯೋತ್ಪಾದಕರು ಆಡಗಿರುವ ಕುಳಿತು ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದರಿಂದಾಗಿ ಭದ್ರತಾ ಪಡೆಗಳು ಎನ್‌ಕೌಂಟರ್‌ಗೆ ಮುಂದಾದವು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ ಬಿಎಸ್‌ಎನ್‌ಎಲ್ ಪೋಸ್ಟ್‌ಪೇಯ್ಡ್ ಹೊರತುಪಡಿಸಿ ಮೊಬೈಲ್ ಇಂಟರ್ನೆಟ್ ಮತ್ತು ಮೊಬೈಲ್ ಟೆಲಿಫೋನ್ ಸೇವೆಗಳನ್ನು ನಗರದಲ್ಲಿ ಕಡಿತಗೊಳಿಸಲಾಗಿದೆ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.