ಶೋಪಿಯಾನ್‌ನ ಜೈನಾಪೋರಾ ಪ್ರದೇಶದ ಮುಂಜ್ ಮಾರ್ಗ್‌ನಲ್ಲಿ ಭಯೋತ್ಪಾದಕರು ಇರುವ ಖಚಿತ ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿದಾಗ, ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರಿಂದ ಭದ್ರತಾ ಪಡೆಯವರು ಪ್ರತಿ ಗುಂಡಿನದಾಳಿ ನಡೆಸಿ ಎನ್‌ಕೌಂಟರ್ ಮಾಡಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಎಕೆ 47 ಹಾಗೂ ಎರಡು ಪಿಸ್ತೂಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.