ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೋಪಿಯಾನ್ ಎನ್‌ಕೌಂಟರ್: ಅಡಗಿರುವ 3 ಉಗ್ರರಿಗೆ ಶರಣಾಗುವಂತೆ ಭದ್ರತಾ ಪಡೆ ಎಚ್ಚರಿಕೆ

Last Updated 11 ಅಕ್ಟೋಬರ್ 2021, 16:37 IST
ಅಕ್ಷರ ಗಾತ್ರ

ಶ್ರೀನಗರ: ದೇಶದ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ದಕ್ಷಿಣ ಕಾಶ್ಮೀರದ ಶೋಪಿಯಾನ್‌ನಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಕನಿಷ್ಠ ಮೂವರು ಉಗ್ರರು ಸಿಲುಕಿರುವುದಾಗಿ ವರದಿಯಾಗಿದೆ.

ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿಯನ್ನು ಆಧರಿಸಿ ಭಾರತೀಯ ಸೇನೆ, ಸಿಆರ್‌ಪಿಎಫ್‌, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶೋಪಿಯಾನ್‌ ಜಿಲ್ಲೆಯ ಇಮಾಮ್‌ ಸಾಹಬ್‌ ವಲಯದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.

ಕಾರ್ಯಾಚರಣೆ ಕುರಿತು ಮಾತನಾಡಿರುವ ಜಮ್ಮು ಮತ್ತು ಕಾಶ್ಮೀರ ಡಿಜಿಪಿ ದಿಲ್ಬಾಗ್‌ ಸಿಂಗ್‌, 'ಖಚಿತ ಮಾಹಿತಿಯನ್ನು ಆಧರಿಸಿ ಇಂದು ಸಂಜೆ ಶೋಪಿಯಾನ್‌ನಲ್ಲಿ ಎರಡು ಕಾರ್ಯಾಚರಣೆಗಳನ್ನು ನಡೆಸಲಾಗಿದೆ. ತಲ್ರಾನ್‌ ಶೋಪಿಯಾನ್‌ನಲ್ಲಿ ಎನ್‌ಕೌಂಟರ್ ನಡೆದಿದ್ದು, 3–4 ಉಗ್ರರು ಸಿಲುಕಿದ್ದಾರೆ' ಎಂದಿರುವುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.

ಖೇರಿಪೊರಾ ಶೋಪಿಯಾನ್‌ನಲ್ಲಿ ಮತ್ತೊಂದು ಕಾರ್ಯಾಚರಣೆ ನಡೆದಿದೆ. ಕಳೆದ 24 ಗಂಟೆಗಳಲ್ಲಿ ಮೂರು ಕಡೆ ಎನ್‌ಕೌಂಟರ್‌ ನಡೆಸಲಾಗಿದೆ.

ಉಗ್ರರನ್ನು ಶರಣಾಗುವಂತೆ ಭದ್ರತಾ ಪಡೆಗಳು ಎಚ್ಚರಿಕೆ ನೀಡಿರುವುದಾಗಿ ಎಎನ್‌ಐ ಸುದ್ದಿ ಸಂಸ್ಥೆ ಟ್ವೀಟಿಸಿದೆ.

ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ವಲಯದಲ್ಲಿ ನುಸುಳುಕೋರರನ್ನು ನಡೆಯುವ ಕಾರ್ಯಾಚರಣೆಯ ವೇಳೆ ಭಾರತೀಯ ಸೇನೆಯ ಐವರು ಯೋಧರು ಮೃತಪಟ್ಟಿದ್ದಾರೆ. ಮೃತರಲ್ಲಿ ಒಬ್ಬರು ಜೂನಿಯಲ್‌ ಕಮಿಷನ್ಡ್‌ ಆಫೀಸರ್‌ ಹಾಗೂ ನಾಲ್ವರು ಸೈನಿಕರು. ಗಡಿ ನಿಯಂತ್ರಣ ರೇಖೆಯಿಂದ (ಎಲ್‌ಒಸಿ) ದೇಶದ ಗಡಿಯೊಳಗೆ ಉಗ್ರರು ನುಸುಳಿರುವ ಕುರಿತು ಗುಪ್ತಚರ ಮಾಹಿತಿಯನ್ನು ಆಧರಿಸಿ ಸೂರನ್‌ಕೋಟ್‌ನ ಡೇರಾ ಕಿ ಗಲಿಗೆ (ಡಿಕೆಜಿ) ಸಮೀಪದ ಗ್ರಾಮದಲ್ಲಿ ಸೇನೆ ಕಾರ್ಯಾಚರಣೆ ನಡೆಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT