ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನೃತ್ಯ ಕಲಾವಿದೆ ಯಾಮಿನಿ ಕೃಷ್ಣಮೂರ್ತಿ ನಿಧನ

Published 4 ಆಗಸ್ಟ್ 2024, 0:23 IST
Last Updated 4 ಆಗಸ್ಟ್ 2024, 0:23 IST
ಅಕ್ಷರ ಗಾತ್ರ

ನವದೆಹಲಿ: ಭರತನಾಟ್ಯ ಮತ್ತು ಕೂಚುಪುಡಿಯ ಹೆಸರಾಂತ ನೃತ್ಯ ಕಲಾವಿದೆ ಯಾಮಿನಿ ಕೃಷ್ಣಮೂರ್ತಿ (84) ಅವರು ಇಲ್ಲಿನ ಅಪೊಲೊ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು.

ವಯೋ ಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಏಳು ತಿಂಗಳಿಂದ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅವರ ಕಾರ್ಯದರ್ಶಿ ಗಣೇಶ್‌ ತಿಳಿಸಿದ್ದಾರೆ. ಯಾಮಿನಿ ಅವರಿಗೆ ಇಬ್ಬರು ಸಹೋದರಿಯರಿದ್ದಾರೆ.

ಯಾಮಿನಿ ಅವರ ಪಾರ್ಥಿವ ಶರೀರವನ್ನು ದೆಹಲಿಯ ಹೌಜ್‌ ಖಾಸ್‌ನಲ್ಲಿನ ‘ಯಾಮಿನಿ ಸ್ಕೂಲ್‌ ಆಫ್‌ ಡಾನ್ಸ್‌’ಗೆ ಭಾನುವಾರ ಬೆಳಿಗ್ಗೆ 9ಕ್ಕೆ ತರಲಾಗುವುದು ಎಂದು ಅವರು ಹೇಳಿದರು.

ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಮದನಪಲ್ಲಿಯಲ್ಲಿ 1940ರ ಡಿಸೆಂಬರ್‌ 20ರಂದು ಅವರು ಜನಿಸಿದ್ದರು. ಸಂಸ್ಕೃತ ವಿದ್ವಾಂಸ ಎಂ. ಕೃಷ್ಣಮೂರ್ತಿ ಅವರ ತಂದೆ. ಅವರು ಐದನೇ ವಯಸ್ಸಿನಿಂದಲೇ ಭರತನಾಟ್ಯ ಕಲಿಕೆಯಲ್ಲಿ ತೊಡಗಿದ್ದರು.

ಯಾಮಿನಿ ಅವರು 28ನೇ ವಯಸ್ಸಿನಲ್ಲಿದ್ದಾಗಲೇ 1968ರಲ್ಲಿ ‘ಪದ್ಮಶ್ರೀ’ ಪ್ರಶಸ್ತಿ ಪುರಸ್ಕೃತರಾಗಿದ್ದರು. 2001ರಲ್ಲಿ ಪದ್ಮಭೂಷಣ, 2016ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿಗಳು ಅವರಿಗೆ ಸಂದಿವೆ. 1977ರಲ್ಲಿ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿಗೆ ಅವರು ಭಾಜನರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT