ಜಮ್ಮು: ಜೈಲಿನಲ್ಲಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ಮೆಹರಾಜ್ ಮಲಿಕ್ ಅವರಿಗೆ ಮುಂಬರುವ ರಾಜ್ಯಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಅವಕಾಶ ಕಲ್ಪಿಸುವಂತೆ ಜಮ್ಮು–ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್ ಶನಿವಾರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿ ರಾಜೇಶ್ ಸೇಖರಿ ಅವರು ಸರ್ಕಾರಕ್ಕೆ ಈ ನಿರ್ದೇಶನ ನೀಡಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ವಕ್ತಾರರು ತಿಳಿಸಿದ್ದಾರೆ.

ಮಲಿಕ್ ಅವರು ಇರುವ ಕಠುವಾ ಕಾರಾಗೃಹಕ್ಕೆ ಅಧಿಕಾರಿಗಳು ಈಗಾಗಲೇ ಅಂಚೆ ಮತಪತ್ರಗಳನ್ನು ರವಾನಿಸಿದ್ದಾರೆ ಎಂದು ಸರ್ಕಾರದ ಪರ ವಕೀಲರು ತಿಳಿಸಿದ್ದಾರೆ.

ಅಕ್ಟೋಬರ್ 23ರಂದು ಶ್ರೀನಗರದಲ್ಲಿ ಆರಂಭವಾಗಲಿರುವ ವಿಧಾನಸಭಾ ಅಧಿವೇಶನದಲ್ಲಿ ಭಾಗವಹಿಸಲು ಮತ್ತು ರಾಜ್ಯಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಅನುಮತಿ ಕೋರಿ ಮಲಿಕ್ ಅರ್ಜಿ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.