ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ. ಬಂಗಾಳದಲ್ಲಿ ಮಾಧ್ಯಮಗಳನ್ನು ಹತ್ತಿಕ್ಕದಂತೆ ನೋಡಿಕೊಳ್ಳಿ: ಮಮತಾಗೆ ಠಾಕೂರ್ ಮನವಿ

Published 22 ಫೆಬ್ರುವರಿ 2024, 12:43 IST
Last Updated 22 ಫೆಬ್ರುವರಿ 2024, 12:43 IST
ಅಕ್ಷರ ಗಾತ್ರ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಪತ್ರಕರ್ತರೊಬ್ಬರ ಬಂಧನವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್‌ ಠಾಕೂರ್‌, ರಾಜ್ಯದಲ್ಲಿ ಮಾಧ್ಯಮಗಳನ್ನು ಹತ್ತಿಕ್ಕದಂತೆ ಕ್ರಮವಹಿಸಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮನವಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪತ್ರಕರ್ತರ ಬಂಧನವು ದುರಾದೃಷ್ಟಕರವಾಗಿದೆ. ರಾಜ್ಯದಲ್ಲಿ ಇಂತಹ ಘಟನೆಗಳು ಮರುಕಳಿಸಬಾರದು. ಈ ಕುರಿತು ಮಮತಾ ಬ್ಯಾನರ್ಜಿ ಅವರು ಎಚ್ಚರಿಕೆ ವಹಿಸಬೇಕು. ಇದು ನನ್ನ ಕೋರಿಕೆಯಾಗಿದೆ’ ಎಂದು ತಿಳಿಸಿದ್ದಾರೆ.

‘ಪತ್ರಿಕಾ ಸ್ವಾತಂತ್ರ್ಯವು ಮಾಧ್ಯಮಗಳ ಹಕ್ಕು. ಅದನ್ನು ಹತ್ತಿಕ್ಕಬಾರದು. ಇದು ಮಮತಾ ಬ್ಯಾನರ್ಜಿ ಅವರಲ್ಲಿ ನನ್ನ ಮನವಿ’ ಎಂದು ಅವರು ಹೇಳಿದ್ದಾರೆ.

ರಿಪಬ್ಲಿಕ್‌ ಬಾಂಗ್ಲಾ ಪತ್ರಕರ್ತ ಸಂತು ಪಾನ್‌ ಅವರನ್ನು ಫೆ. 19ರಂದು ಬಂಧಿಸಲಾಗಿತ್ತು.

ಹಿಂಸಾಚಾರ ಪೀಡಿತ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಸಂದೇಶ್‌ಖಾಲಿಯಲ್ಲಿ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ನಾಯಕ ಶೇಖ್‌ ಷಹಜಹಾನ್‌ ಮತ್ತು ಅವರ ಬೆಂಬಲಿಗರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಸ್ಥಳೀಯ ಮಹಿಳೆಯರು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT