ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಹುಲ್‌ ಭಾರತೀಯ ಎಂಬುದು ಭಾರತಕ್ಕೇ ಗೊತ್ತು: ಪ್ರಿಯಾಂಕಾ 

Last Updated 30 ಏಪ್ರಿಲ್ 2019, 9:41 IST
ಅಕ್ಷರ ಗಾತ್ರ

ನವದೆಹಲಿ:ಬ್ರಿಟನ್‌ ಪೌರತ್ವ ಹೊಂದಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಇಲಾಖೆಯು ರಾಹುಲ್‌ ಗಾಂಧಿ ಅವರಿಗೆ ಮಂಗಳವಾರ ನೋಟಿಸ್‌ ನೀಡಿರುವುದರ ವಿರುದ್ಧ ಕಿಡಿ ಕಾರಿರುವ ಪ್ರಿಯಾಂಕಾ ಗಾಂಧಿ ‘ರಾಹುಲ್‌ ಗಾಂಧಿ ಭಾರತೀಯ ಎಂಬುದು ಭಾರತಕ್ಕೇ ಗೊತ್ತು,’ ಎಂದು ಹೇಳಿದ್ದಾರೆ.

ರಾಹುಲ್‌ ಗಾಂಧಿ ಅವರು ಸ್ಪರ್ಧೆ ಮಾಡಿರುವ ಉತ್ತರ ಪ್ರದೇಶದ ಅಮೇಥಿಯಲ್ಲಿ ಮಂಗಳವಾರ ಪ್ರಚಾರ ನಡೆಸುತ್ತಿದ್ದ ಪ್ರಿಯಾಂಕಾ ಗಾಂಧಿ ಅವರು ನೋಟಿಸ್‌ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ‘ಇಂಥ ಮೂರ್ಖತನದ ಚರ್ಚೆಗಳನ್ನುನಾನೆಂದೂ ಕೇಳಿರಲಿಲ್ಲ. ರಾಹುಲ್‌ ಗಾಂಧಿ ಭಾರತದಲ್ಲೇ ಹುಟ್ಟಿದ್ದು, ಭಾರತದಲ್ಲೇ ಬೆಳೆದದ್ದು. ಇದು ಇಡೀ ಭಾರತಕ್ಕೆ ತಿಳಿದ ವಿಚಾರ,’ ಎಂದು ಅವರು ಹೇಳಿದ್ಧಾರೆ.

ಕಂಪನಿಯೊಂದರ ನೋಂದಣಿ ವೇಳೆ ರಾಹುಲ್‌ ಗಾಂಧಿ ಅವರುತಾವು ಬ್ರಿಟನ್‌ ಪೌರತ್ವ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ ಎಂದು ಆರೋಪಿಸಿ, ರಾಜ್ಯಸಭೆಯ ಬಿಜೆಪಿಸದಸ್ಯ ಸುಬ್ರಮಣಿಯನ್‌ ಸ್ವಾಮಿ ಅವರು ಗೃಹ ಇಲಾಖೆಗೆ ದೂರು ನೀಡಿದ್ದಾರೆ. ಇದೇ ಹಿನ್ನೆಲೆಯಲ್ಲಿ ಗೃಹ ಇಲಾಖೆಯು ಮಂಗಳವಾರ ರಾಹುಲ್‌ ಗಾಂಧಿ ಅವರಿಗೆ ನೋಟಿಸ್‌ ಜಾರಿ ಮಾಡಿ ಸ್ಪಷ್ಟನೆ ಕೇಳಿದೆ.ನೋಟಿಸ್‌ಗೆ ಹದಿನೈದು ದಿನಗಳಲ್ಲಿ ಉತ್ತರ ನೀಡುವಂತೆಯೂ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT