ದೆಹಲಿ: ಗುಜರಾತ್ನ ಸೂರತ್ ಮತ್ತು ಬಿಲಿಮೊರಾ ನಡುವಿನ 50 ಕಿ.ಮೀ. ಉದ್ದದ ಬುಲೆಟ್ ರೈಲು ಯೋಜನೆ 2027ರಲ್ಲಿ ಪೂರ್ಣಗೊಳ್ಳಲಿದ್ದು, ಈ ಮೂಲಕ ದೇಶದ ಮೊದಲ ಬುಲೆಟ್ ರೈಲು ಸಂಚಾರಕ್ಕೆ ಚಾಲನೆ ಸಿಗಲಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಶನಿವಾರ ಹೇಳಿದರು.

ಮುಂಬೈ ಮತ್ತು ಅಹಮದಾಬಾದ್ ನಡುವಿನ ಬುಲೆಟ್ ರೈಲು ಯೋಜನೆಯ ಮೊದಲ ಹಂತ ಇದಾಗಿದೆ.

‘ಬುಲೆಟ್ ರೈಲು ಯೋಜನೆಯ ಕಾಮಗಾರಿಯು ಭರದಿಂದ ಸಾಗುತ್ತಿದೆ. ಠಾಣೆ–ಅಹಮದಾಬಾದ್ ನಡುವೆ 2028ರಲ್ಲಿ ಬುಲೆಟ್ ರೈಲು ಸಂಚಾರ ಆರಂಭಗೊಳ್ಳಲಿದೆ. ಮುಂಬೈ ಮತ್ತು ಅಹಮದಾಬಾದ್ ನಡುವೆ 2029ರಲ್ಲಿ ಬುಲೆಟ್ ರೈಲು ಸಂಚರಿಸಲಿದೆ ಎಂದು ವೈಷ್ಣವ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಈ ಯೋಜನೆಯು ಪೂರ್ಣಗೊಂಡ ಬಳಿಕ ಮುಂಬೈ ಮತ್ತು ಅಹಮದಾಬಾದ್ ನಡುವಿನ ಪ್ರಯಾಣದ ಅವಧಿ ಕೇವಲ 2 ಗಂಟೆ 7 ನಿಮಿಷ ಇರಲಿದೆ.

ಮುಂಬೈ ಮತ್ತು ಅಹಮದಾಬಾದ್ ನಡುವಿನ ಬುಲೆಟ್ ರೈಲು ಯೋಜನೆಗೆ 2017ರಲ್ಲಿ ಚಾಲನೆ ನೀಡಲಾಗಿತ್ತು. 2023ರಲ್ಲಿ ಈ ಯೋಜನೆ ಪೂರ್ಣಗೊಳಿಸಲು ಯೋಜಿಸಲಾಗಿತ್ತು, ಆದರೆ ಭೂಸ್ವಾಧೀನ ಪ್ರಕ್ರಿಯೆಯಿಂದಾಗಿ ಕಾಮಗಾರಿ ವಿಳಂಬಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.