ನವದೆಹಲಿ (ಪಿಟಿಐ): 2023–24ನೇ ಸಾಲಿನಲ್ಲಿ ಆರಂಭವಾಗುವ ಪದವಿ ಕೋರ್ಸ್‌ಗಳಿಗೆ ನೀಡುವ ಪ್ರತಿಷ್ಠಿತ ಎರಾಸ್ಮಸ್ ಮುಂಡಸ್ ವಿದ್ಯಾರ್ಥಿ ವೇತನಕ್ಕೆ ಭಾರತದ 174 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಆಯ್ಕೆಯಾದವರಲ್ಲಿ ಶೇ 50ರಷ್ಟು ವಿದ್ಯಾರ್ಥಿನಿಯರು ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಐರೋಪ್ಯ ಒಕ್ಕೂಟವು ಈ ವಿದ್ಯಾರ್ಥಿ ವೇತನ ನೀಡುತ್ತಿದ್ದು, ಯೂರೋಪ್ ದೇಶಗಳ ಕನಿಷ್ಠ ಎರಡು ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮಾಡಬಹುದಾಗಿದೆ.

ಐರೋಪ್ಯ ಒಕ್ಕೂಟದ ಪ್ರತಿನಿಧಿಗಳು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಆಯ್ಕೆ ನಡೆದಿದೆ. 2022ರಲ್ಲಿ ಭಾರತದ 161 ಮಂದಿ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿದ್ದರು.

ಉತ್ತರಪ್ರದೇಶ, ಮಹಾರಾಷ್ಟ್ರ, ಪಶ್ಚಿಮಬಂಗಾಳ, ದೆಹಲಿ ಹಾಗೂ ಕೇರಳದ ವಿದ್ಯಾರ್ಥಿಗಳು ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಈ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

undefined undefined

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.