ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರದಲ್ಲಿ ವಲಸೆ ಕಾರ್ಮಿಕನ ಕೊಂದ ಉಗ್ರರು: ವಾರದಲ್ಲಿ ಎರಡನೇ ಘಟನೆ

Published 18 ಏಪ್ರಿಲ್ 2024, 2:27 IST
Last Updated 18 ಏಪ್ರಿಲ್ 2024, 2:27 IST
ಅಕ್ಷರ ಗಾತ್ರ

ಶ್ರೀನಗರ: ಶಂಕಿತ ಉಗ್ರರು ಬಿಹಾರ ಮೂಲದ ವಲಸೆ ಕಾರ್ಮಿಕನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಕಾಶ್ಮೀರ ಪೊಲೀಸರು ಹೇಳಿದ್ದಾರೆ.

ಅನಂತನಾಗ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮೃತ ಕಾರ್ಮಿಕನನ್ನು ರಾಜು ಶಾ ಎಂದು ಗುರುತಿಸಲಾಗಿದೆ.

ಶಂಕಿತ ಉಗ್ರರು ರಾಜು ಶಾ ಮೇಲೆ ಗುಂಡು ಹಾರಿಸಿದ್ದರು. ಗಾಯಗೊಂಡಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆ ವೇಳೆಗೆ ರಾಜು ಶಾ ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಪೊಲೀಸರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ವಾರದ ಹಿಂದೆ ಡೆಹ್ರಾಡೂನ್‌ ಮೂಲದ ವ್ಯಕ್ತಿಯ ಮೇಲೆ ಉಗ್ರರು ಗುಂಡು ಹಾರಿಸಿದ್ದರು. ಆ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT