ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಸರ್ಕಾರದ ‘ಅನ್ಯಾಯ ಕಾಲ’ದಲ್ಲಿ ಮಕ್ಕಳೂ ಸುರಕ್ಷಿತರಲ್ಲ: ಕಾಂಗ್ರೆಸ್

Published 29 ಜನವರಿ 2024, 10:48 IST
Last Updated 29 ಜನವರಿ 2024, 10:48 IST
ಅಕ್ಷರ ಗಾತ್ರ

ನವದೆಹಲಿ: 2016–2022ರ ಅವಧಿಯಲ್ಲಿ ಮಕ್ಕಳ ಮೇಲಿನ ಅತ್ಯಾಚಾರ ‍ಪ್ರಕರಣ ಹೆಚ್ಚಳವಾಗಿದೆ ಎನ್ನುವ ಎನ್‌.ಜಿ.ಒ. (ಸ್ವಯಂ ಸೇವಾ ಸಂಸ್ಥೆ) ವರದಿಯನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಮೋದಿ ಸರ್ಕಾರದ ‘ಅನ್ಯಾಯ ಕಾಲ’ದಲ್ಲಿ ಮಕ್ಕಳೂ ಸುರಕ್ಷಿತರಲ್ಲ ಎಂದು ಕಾಂಗ್ರೆಸ್‌ ಟೀಕಿಸಿದೆ.

2016–2022ರ ಅವಧಿಯಲ್ಲಿ ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣ ಶೇ 96ರಷ್ಟು ಹೆಚ್ಚಳವಾಗಿದೆ ಎನ್ನುವ ಮಕ್ಕಳ ಹಕ್ಕು ಎನ್‌.ಜಿ.ಒ. ‘CRY’ನ ವರದಿಯನ್ನು ಉಲ್ಲೇಖಿಸಿ ಕಾಂಗ್ರೆಸ್‌ ಕೇಂದ್ರ ಸರ್ಕಾರದ ಮೇಲೆ ದಾಳಿ ನಡೆಸಿದೆ.

ಈ ಬಗ್ಗೆ ಸಾಮಾಜಿಕ ತಾಣ ‘ಎಕ್ಸ್’ನಲ್ಲಿ ಬರೆದುಕೊಂಡಿರುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್‌, ‘ಮೋದಿ ಸರ್ಕಾರದ ಅನ್ಯಾಯ ಕಾಲದಲ್ಲಿ ಮಕ್ಕಳೂ ಸುರಕ್ಷಿತರಲ್ಲ. ಕಳೆದ 6 ವರ್ಷಗಳಲ್ಲಿ ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣ ಶೇ 96ರಷ್ಟು ಹೆಚ್ಚಳವಾಗಿದೆ. ಕಳೆದ 10 ವರ್ಷಗಳ ಮೋದಿ ಸರ್ಕಾರದ ಅನ್ಯಾಯ ಕಾಲದ ನೋವಿನಿಂದ ಇಂದು ಸಮಾಜದ ಪ್ರಯೊಯೊಬ್ಬರೂ ತೊಂದರೆ ಅನುಭವಿಸುತ್ತಿದ್ದಾರೆ’ ಎಂದು ಅವರು ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT