ಗುರುವಾರ, 13 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪ್ರಧಾನಮಂತ್ರಿ ವಸ್ತು ಸಂಗ್ರಹಾಲಯ’ ಉದ್ಘಾಟನೆ

ಎಲ್ಲ ಪ್ರಧಾನಿಗಳ ಕೊಡುಗೆ ಶ್ಲಾಘಿಸಿದ ಮೋದಿ
Last Updated 14 ಏಪ್ರಿಲ್ 2022, 12:17 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ನವದೆಹಲಿಯಲ್ಲಿ ಪ್ರಧಾನಮಂತ್ರಿ ಸಂಗ್ರಹಾಲಯವನ್ನು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ‘ಒಂದು ಅಥವಾ ಎರಡು ವಿನಾಯಿತಿಗಳನ್ನು ಹೊರತುಪಡಿಸಿ, ಸಂವಿಧಾನಾತ್ಮಕ ಪ್ರಜಾಪ್ರಭುತ್ವದ ಗುರಿಗಳ ಈಡೇರಿಕೆಯಲ್ಲಿ ದೇಶದ ಪ್ರತಿಯೊಬ್ಬ ಪ್ರಧಾನಿಯೂ ಅಪಾರ ಕೊಡುಗೆ ನೀಡಿದ್ದಾರೆ. ಇಂಥ ಕೊಡುಗೆಗಳನ್ನು ನೀಡಿದ ಪ್ರಧಾನಿಗಳ ಕುರಿತು ಪರಿಚಯ, ಸಮಗ್ರ ಮಾಹಿತಿಯನ್ನು ಪ್ರಧಾನಮಂತ್ರಿ ಸಂಗ್ರಹಾಲಯವು ಒಳಗೊಂಡಿದೆ’ ಎಂದರು.

‘ಪ್ರಧಾನಮಂತ್ರಿ ವಸ್ತುಸಂಗ್ರಹಾಲಯವು ಪ್ರತಿ ಸರ್ಕಾರದ ಪರಂಪರೆಯ ಜೀವಂತ ಸಂಕೇತವಾಗಿದೆ. ದೇಶವು ಸ್ವಾತಂತ್ರ್ಯೋತ್ಸವದ 75ನೇ ವರ್ಷವನ್ನು ಆಚರಿಸುತ್ತಿರುವ ಈ ಸಮಯದಲ್ಲಿ, ಈ ವಸ್ತುಸಂಗ್ರಹಾಲಯವು ಸ್ಫೂರ್ತಿ ನೀಡುವ ತಾಣವಾಗಿದೆ’ ಎಂದರು.

‘ಈ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡುವ ಜನರಿಗೆ ದೇಶದ ಮಾಜಿ ಪ್ರಧಾನಿಗಳ ಕೊಡುಗೆಗಳನ್ನು ಪರಿಚಯಿಸಲಾಗುವುದು. ಅಷ್ಟೇ ಅಲ್ಲ, ಅವರ ಹಿನ್ನೆಲೆ ಮತ್ತು ಹೋರಾಟದ ಬಗ್ಗೆಯೂ ಮಾಹಿತಿ ನೀಡಲಾಗುವುದು. ಈ ವಸ್ತು ಸಂಗ್ರಹಾಲಯವು ಸ್ವಾತಂತ್ರ್ಯದ ನಂತರ ದೇಶದ ಪ್ರತಿಯೊಬ್ಬ ಪ್ರಧಾನ ಮಂತ್ರಿಗಳಿಗೆ ಸಂದ ಗೌರವವಾಗಿದೆ’ ಎಂದು ಹೇಳಿದರು.

ಪ್ರಧಾನಮಂತ್ರಿ ವಸ್ತುಸಂಗ್ರಹಾಲಯ ಉದ್ಘಾಟನೆಗೆ ಮುನ್ನವೇ ಮೋದಿ ಅವರು ಮೊದಲ ಟಿಕೆಟ್ ಅನ್ನು ಖರೀದಿಸಿದ್ದರು ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT