ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

EVM ‘ಬ್ಲ್ಯಾಕ್‌ ಬಾಕ್ಸ್‌’ನಂತೆ; ಪರಿಶೀಲನೆಗೆ ಅವಕಾಶವೇ ಇಲ್ಲ: ರಾಹುಲ್‌ ಟೀಕೆ

Published 16 ಜೂನ್ 2024, 12:19 IST
Last Updated 16 ಜೂನ್ 2024, 12:19 IST
ಅಕ್ಷರ ಗಾತ್ರ

ನವದೆಹಲಿ: ‘ಭಾರತದಲ್ಲಿ ವಿದ್ಯುನ್ಮಾನ ಮತಯಂತ್ರಗಳು (ಇವಿಎಂ) ‘ಬ್ಲ್ಯಾಕ್‌ ಬಾಕ್ಸ್’ ಇದ್ದಂತೆ. ಅವುಗಳ ಪರಿಶೀಲನೆಗೆ ಯಾರಿಗೂ ಅವಕಾಶ ನೀಡಲಾಗುವುದಿಲ್ಲ’ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭಾನುವಾರ ಹೇಳಿದ್ದಾರೆ.

ಈ ಕುರಿತು ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಅವರು, ಭಾರತದ ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ.

ಶಿವಸೇನಾ ಅಭ್ಯರ್ಥಿಯ ಸಂಬಂಧಿಯೊಬ್ಬ, ವಾಯವ್ಯ ಮುಂಬೈ ಕ್ಷೇತ್ರದಿಂದ 48 ಮತಗಳಿಂದ ಆಯ್ಕೆಯಾಗಿದ್ದು, ಅವರ ಬಳಿ ಇವಿಎಂ ತೆರೆಯಬಲ್ಲ ಫೋನ್‌ ಇದೆ ಎಂಬುದರ ಕುರಿತ ಮಾಧ್ಯಮ ವರದಿಯನ್ನು ಸಹ ಅವರು ‘ಎಕ್ಸ್‌’ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಅಲ್ಲದೇ, ಇವಿಎಂಗಳನ್ನು ತೆಗೆದು ಹಾಕಬೇಕು ಎಂಬುದಾಗಿ ಉದ್ಯಮಿ ಇಲಾನ್‌ ಮಸ್ಕ್‌ ಪ್ರತಿಪಾದಿಸಿದ್ದು, ಅವರ ಮಾತುಗಳಿರುವ ಪೋಸ್ಟ್‌ಅನ್ನು ಸಹ ರಾಹುಲ್‌ ಗಾಂಧಿ ಹಂಚಿಕೊಂಡಿದ್ದಾರೆ.

‘ಸಂಬಂಧಿಸಿದ ಸಂಸ್ಥೆಗಳಲ್ಲಿ ಉತ್ತರದಾಯಿತ್ವದ ಕೊರತೆ ಇದ್ದಾಗ, ಪ್ರಜಾಪ್ರಭುತ್ವ ವ್ಯವಸ್ಥೆ ಎಂಬುದು ಕಪಟ ಎನಿಸುತ್ತದೆ ಹಾಗೂ ವಂಚನೆಗೆ ಅವಕಾಶ ಮಾಡಿಕೊಡುತ್ತದೆ’ ಎಂದೂ ರಾಹುಲ್‌ ಗಾಂಧಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT