ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಸೇರಿದ ಎಎಪಿಯ ಮಾಜಿ ನಾಯಕ ಜಗಬೀರ್ ಸಿಂಗ್ ಬ್ರಾರ್

Published 21 ಮೇ 2024, 7:51 IST
Last Updated 21 ಮೇ 2024, 7:51 IST
ಅಕ್ಷರ ಗಾತ್ರ

ನವದೆಹಲಿ: ಇನ್ನೂ ಎರಡು ಹಂತದ ಲೋಕಸಭಾ ಚುನಾವಣೆ ಬಾಕಿ ಇರುವಂತೆ, ಪಂಜಾಬ್‌ನ ಎಎಪಿಯ ಮಾಜಿ ನಾಯಕ ಜಗಬೀರ್ ಸಿಂಗ್ ಬ್ರಾರ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಪಂಜಾಬ್‌ನ ಮಾಜಿ ಶಾಸ ಬ್ರಾರ್, ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ತರುಣ್ ಚುಹ್ ನೇತೃತ್ವದಲ್ಲಿ ಪಕ್ಷ ಸೇರ್ಪಡೆಗೊಂಡಿದ್ದಾರೆ.

ವರ್ಷದ ಹಿಂದೆ ಎಎಪಿ ಸೇರ್ಪಡೆಗೂ ಮುನ್ನ ಅವರು, ಶಿರೋಮಣಿ ಅಕಾಲಿ ದಳದ ಸದಸ್ಯರಾಗಿದ್ದರು.

2007ರ ವಿಧಾನಸಭೆ ಚುನಾವಣೆಯಲ್ಲಿ ಜಲಂಧರ್ ಕಂಟೋನ್ಮೆಂಟ್ ಕ್ಷೇತ್ರದಿಂದ ಶಿರೋಮಣಿ ಅಕಾಲಿದಳದ ಶಾಸಕರಾಗಿ ಆಯ್ಕೆಯಾಗಿದ್ದರು.

ಇದಕ್ಕೂ ಮುನ್ನ ಅವರು, ಜಲಂಧರ್‌ನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದರು.

ಈ ಕುರಿತಂತೆ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT